ಫ್ರೂಟ್ಸ್ ತಂತ್ರಾಂಶದಲ್ಲಿ 85 ರೈತರು ನೋಂದಣಿ

20..npk..1
Published on

ನಾಪೋಕ್ಲು: ನಾಪೋಕ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸೋಮವಾರ ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ದಾಖಲೆಗಳನ್ನು ನೋಂದಣಿ ಮಾಡಲಾಯಿತು.


ಬರ ಪರಿಹಾರ, ಬೆಳೆ ಹಾನಿ ಪರಿಹಾರ ಸೇರಿದಂತೆ ಸರ್ಕಾರದ ಸವಲತ್ತುಗಳನ್ನು ಪಡೆಯಲು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳುವುದು ಅವಶ್ಯಕ. ಹಾಗಾಗಿ ರೈತರು ರೈತರು ತಮ್ಮ ಹೆಸರಿನಲ್ಲಿರುವ ಜಮೀನುಗಳ ಪಹಣಿ ಪ್ರತಿಳು, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ಮೊಬೈಲ್ ಸಂಖ್ಯೆ, ಜಾತಿ ಪ್ರಮಾಣ ಪತ್ರದ ಪ್ರತಿ ಒದಗಿಸಿ ನೋಂದಣಿ ಮಾಡಿಕೊಂಡರು. ಕೃಷಿ , ಕಂದಾಯ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಜರಿದ್ದರು. 85 ಜನರು ತಂತ್ರಾಂಶದಲ್ಲಿ ನೋಂದಣಿ ಮಾಡಿಸಿದರು.


ಗ್ರಾಮ ಲೆಕ್ಕಾಧಿಕಾರಿ ಆರ್.ಅಮೃತಾ , ಗ್ರಾಮ ಸಹಾಯಕ ಪ್ರಸಾದ್, ಕೃಷಿ ಇಲಾಖೆ ಸಿಬ್ಬಂದಿ ಸಾಗರಿಕಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net