ಅಂಗಡಿ, ವಾಣಿಜ್ಯ ಸಂಸ್ಥೆ ನೋಂದಣಿ ಮಾಡಿ

Ghagadhar
Published on

ಹುಮನಾಬಾದ್: ಚಿಟಗುಪ್ಪ, ಹುಮನಾಬಾದ್ ತಾಲೂಕಿನ ಎಲ್ಲ ರೀತಿಯ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಕಡ್ಡಾಯವಾಗಿ ನೋಂದಣಿ ಹಾಗೂ ನಿಗದಿತ ಅವಧಿಯಲ್ಲಿ ಪರವಾನಗಿ ನವೀಕರಣ ಮಾಡಿಕೊಳ್ಳಬೇಕು ಎಂದು ತಾಲೂಕು ಕಾರ್ಮಿಕ ಇಲಾಖೆ ನಿರೀಕ್ಷಕ ಗಂಗಾಧರ ಮನವಿ ಮಾಡಿದ್ದಾರೆ. ಆಯಾ ತಾಲೂಕಿನ ಕಾರ್ಮಿಕ ಇಲಾಖೆ ನಿರೀಕ್ಷಕರ ಕಚೇರಿಯಲ್ಲಿ ಕಡ್ಡಾಯವಾಗಿ ನೋಂದಣಿ ಪ್ರಕ್ರಿಯೆಯಲ್ಲಿ ತೊಡಗಬೇಕು ಎಂಬ ಸರ್ಕಾರದ ಆದೇಶವನ್ನು ಪಾಲಿಸಬೇಕು. ತಪಾಸಣೆ ಸಮಯದಲ್ಲಿ ಉಲ್ಲಂಘನೆಗಳು ಕಂಡು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net