ಮಣಿಪಾಲ ಆರೋಗ್ಯ ಕಾರ್ಡ್‌ನ ನೋಂದಣಿ ಆರಂಭ

mng-aug20-kmc
Published on

ಮಂಗಳೂರು: ಮಣಿಪಾಲ ಆರೋಗ್ಯ ಕಾರ್ಡ್‌ನ 2024ನೇ ಸಾಲಿನ ನೋಂದಣಿ ಆರಂಭವಾಗಿದ್ದು, ಜನರು ಈ ರಿಯಾಯಿತಿ ದರದ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಡೀನ್ ಡಾ.ಬಿ. ಉನ್ನಿಕೃಷ್ಣನ್ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಈ ಯೋಜನೆ ಆರಂಭಿಸಲಾಗಿದೆ ಎಂದರು.

ಕೆಎಂಸಿ ಆಸ್ಪತ್ರೆ ಅತ್ತಾವರದ ವೈದ್ಯಕೀಯ ಅಧೀಕ್ಷಕ ಡಾ. ಚಕ್ರಪಾಣಿ ಎಂ. ಮಾತನಾಡಿ, ಆರೋಗ್ಯ ಕಾರ್ಡ್ ಹೊಂದಿದವರು ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ, ಕೆ.ಎಂ.ಸಿ. ಆಸ್ಪತ್ರೆ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ, ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆ ಕಟೀಲು, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ.ಟಿಎಂಎ ಪೈ ಆಸ್ಪತ್ರೆ ಉಡುಪಿ, ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಹಾಗೂ ಮಣಿಪಾಲ್ ಆಸ್ಪತ್ರೆ ಗೋವಾಗಳಲ್ಲಿ ರಿಯಾಯಿತಿ ಸೌಲಭ್ಯ ಪಡೆಯಬಹುದು. ಈ ಕಾರ್ಡ್‌ನ ಸೌಲಭ್ಯಗಳು ದಂತ ಚಿಕಿತ್ಸೆಗೂ ಅನ್ವಯವಾಗಲಿದ್ದು, ಮಣಿಪಾಲ್ ಕಾಲೇಜ್ ಆ್ ಡೆಂಟಲ್ ಸಯನ್ಸಸ್ ಮಂಗಳೂರು ಮತ್ತು ಮಣಿಪಾಲದಲ್ಲಿ ರಿಯಾಯಿತಿ ಪಡೆಯಬಹುದು ಎಂದು ತಿಳಿಸಿದರು.

ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆ ಕಟೀಲು ಮುಖ್ಯ ಆಡಳಿತಾಧಿಕಾರಿ ಡಾ.ಶಿವಾನಂದ ಪ್ರಭು ಮಾತನಾಡಿ, ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಎಲ್ಲ ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಹೊರರೋಗಿ ಸಮಾಲೋಚನೆ ಮೇಲೆ ಶೇ.50ರವರೆಗೆ ರಿಯಾಯಿತಿ, ಪ್ರಯೋಗಾಲಯ ಪರೀಕ್ಷೆಗಳ ಮೇಲೆ ಶೇ.20, ರೇಡಿಯಾಲಜಿ ಪರೀಕ್ಷೆಗಳಾದ ಸಿಟಿ, ಎಂಆರ್‌ಐ, ಅಲ್ಟ್ರಾ ಸೌಂಡ್, ಎಕ್ಸರೇ ಹಾಗೂ ಇನ್ನಿತರ ಪರೀಕ್ಷೆಗಳ ಮೇಲೆ ಶೇ.20 ರಿಯಾಯಿತಿ, ಆಸ್ಪತ್ರೆಯ ಔಷಧಾಲಯದಿಂದ ಖರೀದಿಸಿದ ಔಷಧಗಳ ಮೇಲೆ ಶೇ.10ರವರೆಗೆ ರಿಯಾಯಿತಿ ಇರುತ್ತದೆ. ಒಳರೋಗಿಯಾಗಿ ದಾಖಲಾದರೆ (ಕನ್ಸ್ಯುಮೇಬಲ್ ಮತ್ತು ಪ್ಯಾಕೇಜ್‌ಗಳನ್ನು ಹೊರತುಪಡಿಸಿ) ಬಿಲ್‌ನಲ್ಲಿ ಶೇ.25ರವರೆಗೆ ರಿಯಾಯಿತಿ ಸಿಗುತ್ತದೆ ಎಂದರು.

ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ 350 ರೂ., ಕೌಟಂಬಿಕ ಯೋಜನೆ ಅಂದರೆ ಕಾರ್ಡುದಾರ ಅವರ ಸಂಗಾತಿ ಮತ್ತು 28 ವರ್ಷದೊಳಗಿನ ಮದುವೆಯಾಗದ ಮಕ್ಕಳಿಗೆ 700 ರು. ಮತ್ತು ಕುಟುಂಬ ಪ್ಲಸ್ ಯೋಜನೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯ, ಆತ್ತೆ ಮತ್ತು ಮಾವ) 900 ರೂ., ಎರಡು ವರ್ಷದ ಯೋಜನೆಯಲ್ಲಿ ಒಬ್ಬರಿಗೆ 600 ರೂ, ಕುಟುಂಬಕ್ಕೆ 950 ರೂ. ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ 1100 ರು. ಆಗಿರುತ್ತದೆ ಎಂದು ವಿವರಿಸಿದರು.

ಮಾರ್ಕೆಟಿಂಗ್ ವಿಭಾಗದ ಮುಖ್ಯ ವ್ಯವಸ್ಥಾಪಕ ಸಚಿನ್ ಕಾರಂತ್ ಮಾತನಾಡಿ, ಆಸ್ಪತ್ರೆಗಳ ರಿಯಾಯಿತಿ ಮಾದರಿಗಳನ್ನು ತಿಳಿಯಲು ಮತ್ತು ಹೆಚ್ಚಿನ ವಿವರಗಳನ್ನು ಡಿಡಿಡಿ.ಞಚ್ಞಜಿಚ್ಝಛಿಚ್ಝಠಿಜ್ಚಚ್ಟ.್ಚಟಞ ಮೂಲಕ ತಿಳಿದುಕೊಳ್ಳಬಹುದು. ದೂರವಾಣಿ 0824-2285214, 7022078002ಗೆ ಕರೆ ಮಾಡಬಹುದು ಎಂದರು.

ಡಾ. ಆನಂದ್ ವೇಣುಗೋಪಾಲ್, ಸಗೀರ್ ಸಿದ್ದಿಕಿ, ರಾಕೇಶ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net