ಯಶಸ್ವಿನಿ ಆರೋಗ್ಯ ಯೋಜನೆಗೆ ನೋಂದಣಿ

Published on

ಬಂಟ್ವಾಳ: ಸಹಕಾರ ಸಂಘಗಳ ಸದಸ್ಯರ ಅನೂಕೂಲಕ್ಕಾಗಿ ಜಾರಿಗೊಂಡಿರುವ ಹಾಗೂ ಫಲಾನುಭವಿಗಳ ಕುಟುಂಬಕ್ಕೆ ವಾರ್ಷಿಕ 5 ಲಕ್ಷ ರೂ. ವೈದ್ಯಕೀಯ ಚಿಕಿತ್ಸಾ ವೆಚ್ಚದ ನಗದುರಹಿತ ಸೌಲಭ್ಯದೊಂದಿಗೆ ಚಾಲ್ತಿಯಲ್ಲಿರುವ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಮರುಜಾರಿಗೊಳಿಸಲಾಗಿದ್ದು, ಈಗಾಗಲೇ ಈ ಯೋಜನೆ ಅನ್ವಯ ನೋಂದಾಯಿಸಿಕೊಂಡ ಸದಸ್ಯರು ನವೀಕರಣ ಮಾಡಬಹುದಾಗಿದೆ. ಇಷ್ಟರವರೆಗೆ ನೋಂದಾಯಿಸಿಕೊಳ್ಳದ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ ಹೊಸದಾಗಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಸದಸ್ಯರು ಆಧಾರ್ ಕಾರ್ಡ್, ಪಡಿತರ ಚೀಟಿ ಜೆರಾಕ್ಸ್ ಪ್ರತಿ ಮತ್ತು ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net