ಸುಂಟಿಕೊಪ್ಪ: ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದುರ್ ಶಾಸ್ತ್ರಿ ಅವರ ಜೀವನ ಮೌಲ್ಯಗಳು, ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಶ್ರೀಲತಾ ಹೇಳಿದರು.
ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಾನ್ ಪುರುಷರ ಆದರ್ಶ ಗುಣಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದರು. ವಿದ್ಯಾರ್ಥಿಗಳಿಂದ ಧಾರ್ಮಿಕ ಗ್ರಂಥಗಳ ಪಠಣ ನಡೆಯಿತು.
ಉಪನ್ಯಾಸಕಿ ಕೆ.ಸಿ.ಕವಿತಾ ಉಪನ್ಯಾಸ ನೀಡಿದರು. ಉಪನ್ಯಾಸಕರಾದ ಅಭಿಷೇಕ್, ಸುನೀತಾ, ಪದ್ಮಾವತಿ, ಸುಚಿತ್ರಾ, ಕವಿತ ಭಕ್ತಾ, ಕೆ.ಸಿ.ಮಂಜುಳಾ, ಅನುಷಾ, ಸಂಧ್ಯಾ, ಕನಕಾ ಇದ್ದರು.