

ಜಯಪುರ: ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ಕಾಣದ ಎಷ್ಟೋ ರೋಗ ಲಕ್ಷಣಗಳು ಪತ್ತೆಯಾಗಲಿವೆ ಎಂದು ಅತ್ತಿಕುಡಿಗೆ ಗ್ರಾಪಂ ಮಾಜಿ ಅಧ್ಯಕ್ಷ ವೆಂಕಟಕೃಷ್ಣ ಹೆಬ್ಬಾರ್ ಹೇಳಿದರು.
ಅತ್ತಿಕೊಡಿಗೆ ಗ್ರಾಪಂ ವ್ಯಾಪ್ತಿಯ ಬಿಳಾಲುಕೊಪ್ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಆಯೋಜಿಸಿದ್ದ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರದಲ್ಲಿ ಮಾತನಾಡಿದ ಅವರು, ಬಿಳಾಲುಕೊಪ್ಪದಂತಹ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಕೇಂದ್ರ, ಆಸ್ಪತ್ರೆಗಳು,ವಿರಳವಾಗಿದ್ದು, ಗ್ರಾಮಸ್ಥರ ಆರೋಗ್ಯ ತಪಾಸಣೆಗೆ ಅನುಕೂಲವಾಗಲು ಆರಂಭಿಕ ಹಂತದಲ್ಲಿ ಕಣ್ಣಿನ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಇತರೆ ಎಲ್ಲ ತರದ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ಆಯೋಜಿಸಲಾಗುವುದು ಎಂದರು.
ಶಿಬಿರದಲ್ಲಿ 100ಕ್ಕಿಂತಲೂ ಹೆಚ್ಚು ಜನ ಉಚಿತವಾಗಿ ಮಧುಮೇಹ ಮತ್ತು ರಕ್ತದೊತ್ತಡ ಹಾಗೂ ಕಣ್ಣಿನ ತಪಾಸಣೆ ಮಾಡಿಸಿಕೊಂಡರು. ಕೆಎಂಸಿ ಆಸ್ಪತ್ರೆಯ ನೇತ್ರತಜ್ಞ ಡಾ.ಪ್ರಾಂಚಿ, ಡಾ.ಸುಷ್ಮ, ಡಾ.ಜೋಹಿಬ್, ಜನಸಂಪರ್ಕಕಾಧಿರಿ ಮಂಜುಳಾ, ಬಸ್ರಿಕಟ್ಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಎನ್‌ಸಿಡಿ ಘಟಕದ ರಮ್ಯ, ಸ್ಫೂರ್ತಿ ಮತ್ತು ರಾಜೇಶ್, ನವಚೈತ್ರ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಹಮೀದ್, ಅತ್ತಿಕೊಡಿಗೆ ಗ್ರಾಪಂ ಅಧ್ಯಕ್ಷ ಎನ್.ಟಿ. ಗೋಪಾಲಕೃಷ್ಣ ,ಸಂದೀಪ್, ಬಿಳಾಲುಕೊಪ್ಪ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಹರೀಶ್‌ಭಟ್, ಅತ್ತಿಕೊಡಿಗೆ ಗ್ರಾಪಂ ಮಾಜಿ ಸದಸ್ಯ ಪುಟ್ಟಯ್ಯ, ಉಪಾಧ್ಯಕ್ಷ ಸಂತೋಷ್ ಕುಲಾಸೋ ಇದ್ದರು.