ನಿಯಮಿತ ಆರೋಗ್ಯ ತಪಾಸಣೆ ಅಗತ್ಯ

ಪಿರಿಯಾಪಟ್ಟಣದ ವಕೀಲರ ಭವನದಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣೆ ಮತ್ತು ಅಸಂಘಟಿತ ಕಾರ್ಮಿಕರಿಗೆ ಕಿಟ್ ವಿತರಣೆ ಕಾರ್ಯಕ್ರಮವನ್ನು ಸಿವಿಲ್ ಹಿರಿಯ ಶ್ರೇಣಿ ನ್ಯಾಯಾಧೀಶ ರಾಜು ಉದ್ಘಾಟಿಸಿದರು. ನ್ಯಾಯಾಧೀಶ ಎಂ.ಆರ್.ಯೋಗೀಶ್, ಶ್ವೇತಾ, ಕಾರ್ಮಿಕ ನಿರೀಕ್ಷಕ ಮಂಜುನಾಥ್, ವಕೀಲರ ಸಂಘದ ಅಧ್ಯಕ್ಷ ಧನಪಾಲ್ ಇತರರಿದ್ದರು.
ಪಿರಿಯಾಪಟ್ಟಣದ ವಕೀಲರ ಭವನದಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣೆ ಮತ್ತು ಅಸಂಘಟಿತ ಕಾರ್ಮಿಕರಿಗೆ ಕಿಟ್ ವಿತರಣೆ ಕಾರ್ಯಕ್ರಮವನ್ನು ಸಿವಿಲ್ ಹಿರಿಯ ಶ್ರೇಣಿ ನ್ಯಾಯಾಧೀಶ ರಾಜು ಉದ್ಘಾಟಿಸಿದರು. ನ್ಯಾಯಾಧೀಶ ಎಂ.ಆರ್.ಯೋಗೀಶ್, ಶ್ವೇತಾ, ಕಾರ್ಮಿಕ ನಿರೀಕ್ಷಕ ಮಂಜುನಾಥ್, ವಕೀಲರ ಸಂಘದ ಅಧ್ಯಕ್ಷ ಧನಪಾಲ್ ಇತರರಿದ್ದರು.
Published on

ಪಿರಿಯಾಪಟ್ಟಣ: ಆರೋಗ್ಯ ಹದಗೆಟ್ಟಾಗ ಆಸ್ಪತ್ರೆಗೆ ದೌಡಾಯಿಸುವ ಬದಲು ಮುನ್ನೆಚ್ಚರಿಕೆ ಕ್ರಮವಾಗಿ ನಿಯಮಿತವಾಗಿ ಆರೋಗ್ಯ ತಪಾಸಣೆಗೆ ಒಳಗಾಗುವುದು ಒಳ್ಳೆಯದು ಎಂದು ನ್ಯಾಯಾಧೀಶ ಎಂ.ಆರ್.ಯೋಗೀಶ್ ತಿಳಿಸಿದರು.

ಪಟ್ಟಣದ ವಕೀಲರ ಭವನದಲ್ಲಿ ಮಂಗಳವಾರ ವಕೀಲರ ಸಂಘ ಮತ್ತು ಕಾರ್ಮಿಕ ಇಲಾಖೆ ಆಯೋಜಿಸಿದ್ದ ಆರೋಗ್ಯ ತಪಾಸಣೆ ಮತ್ತು ಅಸಂಘಟಿತ ಕಾರ್ಮಿಕರಿಗೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರದಿಂದ ಸಿಗುವ ಸವಲತ್ತುಗಳ ಕುರಿತು ವ್ಯಾಪಕ ಪ್ರಚಾರ ಸಿಗಬೇಕು, ಫಲಾನುಭವಿಗಳು ಸವಲತ್ತುಗಳನ್ನು ತಾವು ಪಡೆದುಕೊಳ್ಳುವ ಜತೆಗೆ ಇತರರಿಗೂ ಮಾಹಿತಿ ನೀಡಿದರೆ ಯೋಜನೆಯು ಯಶಸ್ವಿಯಾಗಲಿದೆ ಎಂದರು.

ಸಿವಿಲ್ ಹಿರಿಯ ಶ್ರೇಣಿ ನ್ಯಾಯಾಧೀಶ ರಾಜು ಶಿಬಿರ ಉದ್ಘಾಟಿಸಿ ಮಾತನಾಡಿ, ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದರಿಂದ ಕುಟುಂಬದ ಅಗತ್ಯಗಳಿಗೆ ಸಕಾಲದಲ್ಲಿ ಸ್ಪಂದಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಶ್ವೇತಾ ಮಾತನಾಡಿ, ಆರೋಗ್ಯವಂತ ಕಾರ್ಮಿಕರು, ಕೃಷಿಕರು, ನಾಗರಿಕರು ರಾಷ್ಟ್ರದ ಆರ್ಥಿಕ ಶಕ್ತಿಯಾಗಲಿದ್ದಾರೆ. ಈ ಕಾರಣದಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ಅಗತ್ಯವಿದೆ ಎಂದರು.

ವಕೀಲರ ಸಂಘದ ಅಧ್ಯಕ್ಷ ಧನಪಾಲ್ ಮಾತನಾಡಿ, ದೇಶದ ಆರೋಗ್ಯ ಸೂಚ್ಯಂಕ ಉತ್ತಮವಾಗಿದ್ದರೆ ದೇಶದ ಆರ್ಥಿಕ ಪ್ರಗತಿ ಸಹ ಉತ್ತಮವಾಗಲಿದೆ ಎಂದರು. ಈ ಸಂದರ್ಭದಲ್ಲಿ ಗಾರೆ ಕೆಲಸಗಾರರಿಗೆ ಕಾರ್ಮಿಕ ಇಲಾಖೆ ವತಿಯಿಂದ ಉಚಿತ ಟೂಲ್ ಕಿಟ್‌ಗಳನ್ನು ವಿತರಿಸಲಾಯಿತು.

ಆರೋಗ್ಯ ಶಿಬಿರದಲ್ಲಿ ವಕೀಲರು, ಅಸಂಘಟಿತ ಕಾರ್ಮಿಕರು, ನ್ಯಾಯಾಧೀಶರು ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಕಾರ್ಯಕ್ರಮದಲ್ಲಿ ಕಾರ್ಮಿಕ ನಿರೀಕ್ಷಕ ಮಂಜುನಾಥ್, ವಕೀಲರ ಸಂಘದ ಕಾರ್ಯದರ್ಶಿ ಶಂಕರ್, ಉಪಾಧ್ಯಕ್ಷ ಚಂದ್ರೇಗೌಡ, ಖಜಾಂಚಿ ಹರೀಶ್, ಸರ್ಕಾರಿ ಸಹಾಯಕ ಅಭಿಯೋಜಕರಾದ ಶ್ರೀನಾಥ್, ಶಿವಶಂಕರ್ ಗಾಂವ್‌ಕರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net