

ತುಮಕೂರು: ಬೀದಿಬದಿ ವ್ಯಾಪಾರಿಗಳಿಗೆ ಪುನರ್ವಸತಿ ಕಲ್ಪಿಸದೆ ಒಕ್ಕಲೆಬ್ಬಿಸಬಾರದು. ಶಾಶ್ವತ ನೆಲೆಯಾಗಿ ವೆಂಡಿಂಗ್ ರೆನ್‌ಗಳನ್ನು ನಿರ್ಮಿಸುವಂತೆ ಒತ್ತಾಯಿಸಿ ಜಿಲ್ಲಾ ುಟ್‌ಪಾತ್ ವ್ಯಾಪಾರಿಗಳ ಸಂಘ ಸಿಐಟಿಯು ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಿತು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದ ಫುಟ್‌ಪಾತ್ ವ್ಯಾಪಾರಿಗಳು, ಕೆಲವೆಡೆ ಗುರುತಿನ ಚೀಟಿ ನೀಡಲಾಗಿದೆಯಾದರೂ ನವೀಕರಿಸಿಲ್ಲ. ುಟ್‌ಪಾತ್ ವ್ಯಾಪಾರಿಗಳನ್ನು ಪುನರ್ ವಸತಿ ಕಲ್ಪಿಸದೆ ದೌರ್ಜನ್ಯದಿಂದ ಒಕ್ಕಲೆಬ್ಬಿಸಲಾಗುತ್ತಿದೆ. ಇದು ನಿಲ್ಲಬೇಕು. ಲಾಕ್‌ಡೌನ್‌ನಿಂದಾಗಿ ವ್ಯಾಪಾರವೇ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲಾಡಳಿತ ಬೀದಿಬದಿ ವ್ಯಾಪಾರಿಗಳಿಗೆ ಸೂಕ್ತ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಹ್ಮಣ್ಯ, ಕೇಂದ್ರದ ಕಾಯ್ದೆ ಹಾಗೂ ರಾಜ್ಯ ಸರ್ಕಾರದ ನಿಯಮಾವಳಿಗಳಂತೆ ಬೀದಿಬದಿ ವ್ಯಾಪಾರಿಗಳು ವ್ಯಾಪಾರ ಮಾಡುವ ಹಾಗೂ ಬದುಕುವ ಹಕ್ಕನ್ನು ನೀಡಿದೆ. ಅವರು ವ್ಯಾಪಾರ ಮಾಡುತ್ತಿರುವ ಸ್ಥಳದಲ್ಲೇ ಗುರುತಿಸಿ ಗುರುತಿನ ಚೀಟಿ ನೀಡಬೇಕಿದ್ದು ಈಗ ಒಕ್ಕಲೆಬ್ಬಿಸುತ್ತಿರುವುದು ಸರಿಯಲ್ಲ ಎಂದರು.
ನಗರದ ಬೆಳವಣಿಗೆ ಹಿನ್ನೆಲೆಯಲ್ಲಿ 8 ದಿಕ್ಕುಗಳಲ್ಲಿ ಬೀದಿಬದಿ ವ್ಯಾಪಾರಿಗಳ ವಲಯಗಳ ನಿರ್ಮಾಣಕ್ಕೆ ಸ್ಮಾರ್ಟ್‌ಸಿಟಿಯಿಂದ ಕನಿಷ್ಠ 15 ಕೋಟಿ ರೂ., ಮೀಸಲಿಡಬೇಕು ಎಂದು ಪಟ್ಟಣ ವ್ಯಾಪಾರಿಗಳ ಸಮಿತಿ ಸದಸ್ಯ ಜಿ.ಜಗದೀಶ್ ಒತ್ತಾಯಿಸಿದರು.
ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್, ವೆಂಡಿಂಗ್ ಸಮಿತಿ ಸದಸ್ಯ ವಸೀಂ ಅಕ್ರಂ, ಪಟ್ಟಣ ವ್ಯಾಪಾರಿಗಳ ಸಮಿತಿ ಸದಸ್ಯ ಎನ್. ಮುತ್ತುರಾಜ್ ಮತ್ತಿತರರು ಭಾಗವಹಿಸಿದ್ದರು.
ಜಿಲ್ಲಾಧಿಕಾರಿ ಭರವಸೆ:ಬೀದಿಬದಿ ವ್ಯಾಪಾರಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಸಂಬಂಧ ಸಭೆ ಕರೆಯಲಾಗುವುದು. ವೆಂಡಿಂಗ್ ರೆನ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. ಎಂಜಿ.ರಸ್ತೆಯ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಜಿಲ್ಲಾಡಳಿತ ಬದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಪ್ರತಿಭಟನಾನಿರತರಿಗೆ ಭರವಸೆಯಿತ್ತರು.