

ಮಡಿಕೇರಿ:
ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ೩೦ ಮಂದಿ ಅಧಿಕಾರಿ ಸಿಬ್ಬಂದಿಯನ್ನೊಳಗೊಂಡ ಜಿಲ್ಲಾ ವಿಪತ್ತು ನಿರ್ವಹಣಾ ತಂಡದಿಂದ ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆ ನಡೆಸುವ ಬಗ್ಗೆ ಅಭ್ಯಾಸ ನಡೆಸಲಾಯಿತು. ಈ ಕಾರ್ಯಾಚರಣೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಡಿವೈ.ಎಸ್.ಪಿ. ಸೋಮವಾರಪೇಟೆ, ಸಿಪಿಐ ಕುಶಾಲನಗರ, ಆರ್.ಪಿ.ಐ. ಡಿಎಆರ್ ಮಡಿಕೇರಿ ಹಾಗು ಇನ್ನಿತರ ಅಧಿಕಾರಿ ಮತ್ತು ಸಿಬ್ಬಂದಿ ಇದ್ದರು.