ಪುನರ್ಜನ್ಮ ನೀಡಿದ್ದು ಗ್ರಾಮೀಣ ಕ್ಷೇತ್ರ

4Manjari3-web
ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದಲ್ಲಿ ಸೋಮವಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಗ್ರಾಮಸ್ಥರು ಸ್ವಾಗತಿಸಿದರು. ಚನ್ನರಾಜ ಹಟ್ಟಿಹೊಳಿ, ಚಂಬಣ್ಣ ನಾವಲಗಿ, ಸ್ಮಿತಾ ಪಾಟೀಲ, ಅಡಿವೇಶ ಇಟಗಿ, ಸ್ವಾತಿ ಇಟಗಿ ಇತರರಿದ್ದರು.
Published on

ಬೆಳಗಾವಿ: ಜೀವನದಲ್ಲಿ ಎಷ್ಟೇ ಎತ್ತರಕ್ಕೆ ಏರಿದರೂ ನಮ್ಮ ಮೂಲ ಬೇರು ಮರೆಯಬಾರದು. ಹಾಗಾಗಿ ನಾನು ನನಗೆ ರಾಜಕೀಯವಾಗಿ ಮರುಜನ್ಮ ನೀಡಿದ ಗ್ರಾಮೀಣ ಕ್ಷೇತ್ರವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ರಾಜ್ಯ ಮಹಿಳಾ ಮತ್ತ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶಿವಶರಣ ಹಡಪದ ಅಪ್ಪಣ್ಣ ದೇವಸ್ಥಾನದ 9ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಭಿವೃದ್ಧಿ ವಿಷಯದಲ್ಲೂ ನನ್ನ ಮೊದಲ ಆದ್ಯತೆ ಗ್ರಾಮೀಣ ವಿಧಾನಸಭಾ ಕ್ಷೇತ್ರವೇ ಆಗಿದೆ. ಕ್ಷೇತ್ರದ ಮೇಲಿನ ನನ್ನ ಪ್ರೀತಿ ಮತ್ತು ನನ್ನ ಮೇಲಿನ ಕ್ಷೇತ್ರದ ಜನರ ಪ್ರೀತಿ ಎರಡನ್ನೂ ಲೆಕ್ಕ ಹಾಕಲು ಸಾಧ್ಯವಿಲ್ಲ. ಹಾಗಾಗಿ ರಾಜ್ಯದ ಜವಾಬ್ದಾರಿ ನನ್ನ ಮೇಲಿದ್ದರೂ ಕ್ಷೇತ್ರದ ಮೇಲಿನ ತುಡಿತ ನಿರಂತರ ಎಂದರು.

ವರಮಹಾಲಕ್ಷ್ಮೀ ಪೂಜೆ ಸಂಭ್ರಮ: ಹಿರೇಬಾಗೇವಾಡಿಯ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹಾಗೂ ಸಾಮೂಹಿಕ ವರಮಹಾಲಕ್ಷ್ಮೀ ಪೂಜಾ ಸಮಿತಿ ಮತ್ತು ಪ್ರಗತಿಬಂಧು ಜ್ಞಾನವಿಕಾಸ ಸ್ವಸಹಾಯ ಸಂಘಗಳ ಒಕ್ಕೂಟದಿಂದ ಭೆಂಡಿಗೇರಿ ವಲಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿಯಾದರು. ಹೆಬ್ಬಾಳ್ಕರ್ ಮಾತನಾಡಿ, ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಡಾ.ಹೇಮಾವತಿ ಹೆಗ್ಗಡೆ ಅವರ ಕೃಪಾಶೀರ್ವಾದ ಸದಾ ನಮ್ಮೆಲ್ಲರ ಮೇಲಿದೆ. ಅವರ ನಡೆ, ನುಡಿ ನಮಗೆಲ್ಲ ಆದರ್ಶವಾಗಿದೆ. ಧರ್ಮಸ್ಥಳ ಗ್ರಾಮಾಭಿವದ್ಧಿ ಸಂಘದ ಮೂಲಕ ರಾಜ್ಯಾದ್ಯಂತ ಅವರು ಜನರ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಶ್ಲಾಘಿಸಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಚಂಬಣ್ಣ ನಾವಲಗಿ, ಸ್ಮಿತಾ ಪಾಟೀಲ, ಪುಷ್ಪ ದೊಡನಾಯ್ಕರ್, ಗೌರವ್ವ ಪಾಟೀಲ, ಮೀರಾ ನದಾಫ್, ಸಿ.ಸಿ.ಪಾಟೀಲ, ಅಡಿವೇಶ ಇಟಗಿ, ಸ್ವಾತಿ ಇಟಗಿ, ಮಲ್ಲಯ್ಯ ಶಿವಬುದ್ದಯ್ಯ ಹಿರೇಮಠ ಸ್ವಾಮಿ, ಶಂಕ್ರಯ್ಯ ಸುರಗಿಮರಸ್ವಾಮಿ, ಸಿ.ಸಿ.ಪಾಟೀಲ, ಚಂದ್ರಪ್ಪ ಉಪ್ಪಿನ್, ಶಿವಾನಂದ ಚಂಡು, ಸತೀಶ ನಾಯ್ಕ, ಶ್ರೀಕಾಂತ ಮಾಧುಭರಮಣ್ಣವರ, ಚಂದ್ರಪ್ಪ ನಾವಲಗಿ ಇತರರಿದ್ದರು.

ಋಣ ತೀರಿಸಲು ನನ್ನಿಂದ ಸಾಧ್ಯವಿಲ್ಲ

ಕ್ಷೇತ್ರದ ಜನರ ಪ್ರೀತಿಯ ಋಣ ತೀರಿಸಲು ನನ್ನಿಂದ ಸಾಧ್ಯವೇ ಇಲ್ಲ. ಸಾಧ್ಯವಾದಷ್ಟು ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ತರುವ ಮೂಲಕ ನನ್ನಿಂದಾದ ಮಟ್ಟಿಗೆ ನಿಮ್ಮ ಸೇವೆ ಮಾಡುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಭೆಂಡಿಗೇರಿ ಗ್ರಾಮದ ವಿವಿಧ ಸಂಘ-ಸಂಸ್ಥೆಗಳು ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಮ್ಮೆಲ್ಲರ ಸಹಕಾರ ಎಂದೆಂದೂ ನನ್ನ ಮೇಲಿರಲಿ. ನಿಮ್ಮ ಸೇವೆಗೆ ನಾನು ಸದಾ ಬದ್ಧವಾಗಿದ್ದೇನೆ ಎಂದರು.

ಸಮುದಾಯ ಭವನ ಉದ್ಘಾಟನೆ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಗಣೇಶಪುರ ಗ್ರಾಮದ ಜ್ಯೋತಿ ನಗರದಲ್ಲಿ ಸಾಯಿಬಿನ್ ದೇವಿ ಮಂದಿರದ ನೂತನ ಸಮುದಾಯ ಭವನವನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಸಿ.ಸಿ.ಪಾಟೀಲ, ಸುರೇಶ ಇಟಗಿ, ರವಿ ಮೆಳೇದ ಇತರರು ಸಾಥ್ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net