ಬರ ಪರಿಹಾರ ಬಿಡುಗಡೆ ಮಾಡಿ

14M.D.R.5 GOLLARADODDI ASHOK
Published on


ಮಂಡ್ಯ : ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬರ ಪರಿಹಾರವನ್ನು ಶೀಘ್ರವಾಗಿ ವಿತರಣೆ ಮಾಡದೆ ರೈತರ ಜೀವನದಲ್ಲಿ ಚೆಲ್ಲಾಟವಾಗುತ್ತಿದೆ ಎಂದು ರೈತ ಸಂಘದ ಮುಖಂಡ ಗೊಲ್ಲರದೊಡ್ಡಿ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಜಿಲ್ಲೆಯಲ್ಲಿ ಭೀಕರ ಬರಗಾಲ ಬಂದು ರೈತರು ತಾವು ಬೆಳೆದ ಬೆಳೆಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗದೆ ಪರಿತಪ್ಪಿಸುವ ಜತೆಗೆ ಆರ್ಥಿಕ ಸಂಕಷ್ಟ ಎದುರುಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರಗಳು ರೈತರ ಹಿತದೃಷ್ಠಿಯಿಂದ ಬರ ಪರಿಹಾರವನ್ನು ಶೀಘ್ರವಾಗಿ ವಿತರಣೆ ಮಾಡಿ ಅನುಕೂಲ ಕಲ್ಪಿಸದೆ ವಿಳಂಬ ಧೋರಣೆ ಅನುಸರಿಸುತ್ತಿರುವುದು ಸರಿಯಲ್ಲ ಎಂದು ಪ್ರಕಟಣೆಯಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.


ತಾಲೂಕಿನ ಕೊನೇ ಭಾಗದ ವಿಶ್ವೇಶ್ವರಯ್ಯ ನಾಲೆಗಳನ್ನು ಆಧುನೀಕರಣಗೊಳಿಸಿಲ್ಲ. ಇದರಿಂದ ಕೆ.ಆರ್.ಎಸ್.ನಿಂದ ಸಮರ್ಪಕವಾಗಿ ನೀರು ಹರಿಯದೆ ರೈತರು ವ್ಯವಸಾಯ ಮಾಡಲು ಕಷ್ಟವಾಗುತ್ತಿದೆ. ಈ ಕೂಡಲೇ ಸರ್ಕಾರ ತಾಲೂಕಿನ ವಿಶ್ವೇಶ್ವರಯ್ಯ ನಾಲೆಯನ್ನು ಆಧುನಿಕರಣ ಮಾಡುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಸರ್ಕಾರಕ್ಕೆ ಅಗ್ರಹ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net