ಪತ್ತೆದಾರಿ ಕಾದಂಬರಿ ಬರವಣಿಗೆ ಸವಾಲು

gangolli
Published on

ಗಂಗೊಳ್ಳಿ: ಪತ್ತೆದಾರಿ ಕಾದಂಬರಿಗಳನ್ನು ಬರೆಯುವುದು ಲೇಖಕನಿಗೆ ದೊಡ್ಡ ಸವಾಲು. ಇದನ್ನು ನರೇಂದ್ರ ಅವರು ಯಶಸ್ವಿಯಾಗಿ ನಿಭಾಯಿಸಿದ್ದಾರೆ ಎಂದು ನಿವೃತ್ತ ಉಪನ್ಯಾಸಕ ಎಚ್.ಭಾಸ್ಕರ್ ಶೆಟ್ಟಿ ಹೇಳಿದರು.

ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಯುವ ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಅವರ ನಿಭೃತ ಪತ್ತೆದಾರಿ ಕಾದಂಬರಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಕುಂದಾಪುರದ ಚಿನ್ಮಯ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಉಮೇಶ್ ಪುತ್ರನ್ ಶುಭಹಾರೈಸಿದರು. ಜಿಎಸ್‌ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ.ಕಾಶಿನಾಥ್ ಪೈ ಅಧ್ಯಕ್ಷತೆ ವಹಿಸಿದ್ದರು. ಉಡುಪಿಯ ವಕೀಲ ಎಚ್.ರಾಘವೇಂದ್ರ ಶೆಟ್ಟಿ, ಸಮಾಜ ಸೇವಕಿ ಮಂಜುಳಾ ದೇವಾಡಿಗ, ಗಂಗೊಳ್ಳಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಬಿಲ್ಲವ, ಶೋಭರಾಣಿ ಶೆಟ್ಟಿ ಉಪಸ್ಥಿತರಿದ್ದರು.

ಗೋಪಾಲ ಚಂದನ್ ಸ್ವಾಗತಿಸಿದರು. ನರೇಂದ್ರ ಎಸ್. ಗಂಗೊಳ್ಳಿ ಪ್ರಸ್ತಾವನೆಗೈದರು. ನಾರಾಯಣ ಈ ನಾಯ್ಕ ಪುಸ್ತಕ ಪರಿಚಯಿಸಿದರು. ಜಿ.ಆರ್.ಪ್ರಭಾಕರ್ ಶೇರುಗಾರ ವಂದಿಸಿದರು. ಶ್ರೀಧರ ಗಾಣಿಗ ಕಾರ್ಯಕ್ರಮ ನಿರೂಪಿಸಿದರು. ಪೃಥ್ವಿ ಮತ್ತು ಮೆಹಕ್ ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net