ಡಾ.ರಾಗೌ ಅವರ ‘ಎರಡು ನಾಟಕಗಳು’ ಮತ್ತು ‘ಪಂಪಪುನರಾಲೋಕನ’ ಪುಸ್ತಕಗಳ ಬಿಡುಗಡೆ

20
Published on

ಮೈಸೂರು: ಡಾ.ರಾಗೌ ಅವರ ‘ಎರಡು ನಾಟಕಗಳು’ ಮತ್ತು ‘ಪಂಪಪುನರಾಲೋಕನ’ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಶನಿವಾರ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ನೆರವೇರಿತು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸಂವಹನ ಪ್ರಕಾಶಕರು ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ವಿವಿ ಕುಲಪತಿ ಪ್ರೊ.ಡಿ.ಎಂ.ಪರಮಶಿವಮೂರ್ತಿ ಪುಸ್ತಕಗಳನ್ನು ಬಿಡುಗಡೆ ಮಾಡಿದರು.

ಪ್ರಾಧ್ಯಾಪಕ ಪ್ರೊ.ಮೈಸೂರು ಕೃಷ್ಣಮೂರ್ತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಜೆಎಸ್‌ಎಸ್ ಮಹಾವಿದ್ಯಾಪೀಠದ ಪ್ರಕಟಣ ವಿಭಾಗ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ, ಕೃತಿಕಾರ ಡಾ.ರಾಗೌ, ಪ್ರಕಾಶಕ ಡಿ.ಎನ್.ಲೋಕಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net