

ವಿಜಯವಾಣಿ ಸುದ್ದಿಜಾಲ ಕಾರ್ಕಳ
ನಾಡಿನ ಶ್ರೀಮಂತ ಪರಂಪರೆ ಒಳಗೊಂಡ ಸಾಹಿತ್ಯವನ್ನು ಉಳಿಸಿ ಬೆಳೆಸುವ ಕಾರ್ಯವಾಗಬೇಕು. ನಮ್ಮ ವೈಚಾರಿಕ ವಿಚಾರಗಳನ್ನು ಉಲ್ಲೇಖಿಸುವಂತಹ ಸಾಹಿತಿಗಳನ್ನು ನಾವು ಪೋಷಿಸಬೇಕು. ಸಾಹಿತಿಗಳ ಸಮ್ಮೇಳನ ಕಾರ್ಯಕ್ರಮ ಶ್ಲಾಘನೀಯ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಕುಂಜಿಬೆಟ್ಟು ಶಾರದ ಕಲ್ಯಾಣ ಮಂಟಪದಲ್ಲಿ ಸೆ.29ರಂದು ನಡೆಯಲಿರುವ ಕರಾವಳಿಯ ಸಾಹಿತಿಗಳು-ಕಲಾವಿದರು, ಲೇಖಕರು, ಕವಿಗಳು ಹಾಗೂ ಚುಟುಕು ಬರಹಗಾರರ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಕಾರ್ಕಳ ಶಾಸಕರ ವಿಕಾಸ ಜನಸೇವಾ ಕಚೇರಿಯಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು.
ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ವಿಜಯ್ ಕೊಡವೂರು ಮಾತನಾಡಿದರು. ಬಿಜೆಪಿ ಕಾರ್ಕಳ ಮಂಡಲದ ಉಪಾಧ್ಯಕ್ಷ ಅನಂತಕೃಷ್ಣ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಯರಾಮ್ ಸಾಲ್ಯಾನ್, ಮಹಾವೀರ ಹೆಗ್ಡೆ, ಜಿಲ್ಲಾ ವಕ್ತಾರ ಮುಟ್ಲುಪಾಡಿ ಸತೀಶ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಉದಯ್ ಕೋಟ್ಯಾನ್, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಕುಲಾಲ್, ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸತೀಶ್ ಬೋಳ, ಕಾರ್ಯಕ್ರಮದ ಕಾರ್ಕಳ ಪ್ರಭಾರಿ ಶರತ್ ಶರ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿಂದುಳಿದ ವರ್ಗಗಳ ಮೊರ್ಚಾದ ಕಾರ್ಕಳ ಮಂಡಲ ಅಧ್ಯಕ್ಷ ಪ್ರಸಾದ್ ಐಸಿರ ಕಾರ್ಯಕ್ರಮ ನಿರೂಪಿಸಿದರು.