ಆಮಂತ್ರಣ ಪತ್ರಿಕೆ ಬಿಡುಗಡೆ: ಶ್ರೀ ಸತ್ಯನಾರಾಯಣ ಪೂಜೆ, ವಾರ್ಷಿಕೋತ್ಸವ

Published on

ಬಂಟ್ವಾಳ: ನರಿಕೊಂಬು ಶ್ರೀ ವಿಜಯಲಕ್ಷ್ಮೀ ಯುವಕ ಸಂಘದ 30ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಸಂಘದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ನಾರಿಕೊಂಬೇಶ್ವರ ದೇವಸ್ಥಾನದಲ್ಲಿ ಸಂಘದ ಹಿರಿಯ ಸದಸ್ಯ ಪ್ರೇಮನಾಥ ಶೆಟ್ಟಿ ಬಿಡುಗಡೆಗೊಳಿಸಿದರು.

ಸಂಘದ ಗೌರವಾಧ್ಯಕ್ಷ ಜಗದೀಶ್, ಅಧ್ಯಕ್ಷ ಹರೀಶ್ ಕುಲಾಲ್, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಗಾಣಿಗ, ಕೋಶಾಧಿಕಾರಿ ಕೃಷ್ಣಪ್ಪ ಗಾಣಿಗ, ಜತೆಕಾರ್ಯದರ್ಶಿ ಸುರೇಶ್ ಕುಲಾಲ್, ಕ್ರೀಡಾ ಕಾರ್ಯದರ್ಶಿ ಗಿರೀಶ್ ಪೂಜಾರಿ, ಸಂಘದ ಹಿರಿಯ ಸದಸ್ಯರಾದ ಶ್ರೀಶ ರಾಯಸ, ಬಾಲಕೃಷ್ಣ, ಪ್ರಸಾದ್ ಬೋರುಗುಡ್ಡೆ, ಚಂದ್ರ ಕುಲಾಲ್, ಕೂಸಪ್ಪ ಅಂತರ, ಕೊರಗಪ್ಪ, ವಸಂತ ಅಂತರ, ರಾಜೇಶ್ ಕೆದ್ದೇಲು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net