ಸಂಘಟಿತ ಕೆಲಸದಿಂದ ದೇವಳ ಜೀರ್ಣೋದ್ಧಾರ : ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಪ್ರತಿಪಾದನೆ

18
Published on

ಬಂಟ್ವಾಳ: ಶಿಥಿಲಾವಸ್ಥೆಯಲ್ಲಿರುವ ದೇವಸ್ಥಾನದ ಅಭಿವೃದ್ಧಿ ಕಾರ್ಯ ಸಂಘಟಿತವಾಗಿ ಮಾಡಿದಾಗ ಅತ್ಯಂತ ಸುಲಭವಾಗಿ ನಿರೀಕ್ಷಿತ ಗುರಿ ತಲುಪಬಹುದು ಎಂದು ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು.

ಪೆರಾಜೆ, ಮಾಣಿ ಮತ್ತು ಅರೆಬೆಟ್ಟು ಮೂರು ಗ್ರಾಮಗಳಿಗೆ ಸೇರಿದ ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.

ಹಿರಿಯರಾದ ಶಂಕರನಾರಾಯಣ ಘನಪಾಠಿ ಮಾತನಾಡಿ, ಮಕ್ಕಳಿಗೆ ಧರ್ಮ, ಸಂಸ್ಕಾರ ತಿಳಿಸುವ ಕಾರ್ಯ ನಮ್ಮಿಂದಾಗಬೇಕಾಗಿದೆ ಎಂದರು.

ಸುಮಾರು 2.3 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಳ್ಳುವ ಈ ದೇವಾಲಯದ ನೀಲಿನಕಾಶೆ ತಯಾರಿಸಿದ ಜಗನ್ನಿವಾಸ ರಾವ್ ಮಾಹಿತಿ ನೀಡಿದರು. ದೇಣಿಗೆ ನೀಡಿದ ದಾನಿಗಳನ್ನು ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಸಚಿನ್ ರೈ ಮಾಣಿಗುತ್ತು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪುಷ್ಪರಾಜ ಚೌಟ ಮಾಣಿ, ಗೌರವ ಸಲಹೆಗಾರ ಬಿ.ಟಿ.ನಾರಾಯಣ ಭಟ್, ಜಗನ್ನಾಥ ಚೌಟ ಬದಿಗುಡ್ಡೆ, ಗೌರವ ಕೋಶಾಧಿಕಾರಿ ಡಾ.ಶ್ರೀನಾಥ್ ಆಳ್ವ ಪೆರಾಜೆಗುತ್ತು ಉಪಸ್ಥಿತರಿದ್ದರು.

ಸಮಿತಿಯ ಪ್ರಮುಖರಾದ ಚಂದ್ರಹಾಸ ಶೆಟ್ಟಿ ಬುಡೋಳಿಗುತ್ತು, ಗೋಪಾಲ ಮೂಲ್ಯ ನೆಲ್ಲಿ, ಸಂದೀಪ್ ಶೆಟ್ಟಿ ಅರೆಬೆಟ್ಟು, ಕುಶಲ ಎಂ.ಪೆರಾಜೆ, ಹರೀಶ್ ರೈ ಪಾಣೂರು, ದೀಪಕ್ ಪೆರಾಜೆ, ಲಕ್ಷ್ಮೀಶ ನಾಯ್ಕ, ಶ್ರೀನಿವಾಸ ಪೆರಾಜೆ, ರಾಘವ ಗೌಡ, ನಾರಾಯಣ ಎಂ.ಪಿ, ಮಾಧವ ಕುಲಾಲ್, ನಾರಾಯಣ ಶೆಟ್ಟಿ ತೋಟ, ರವೀಂದ್ರ ರೈ ಮಂಜೊಟ್ಟಿ, ಉಮೇಶ್ ಎಸ್.ಪಿ, ದಿವಾಕರ ಗೌಡ ಶಾಂತಿಲ ಉಪಸ್ಥಿತರಿದ್ದರು.

ಕಾರ್ಯದರ್ಶಿ ರಾಜಾರಾಮ ಕಾಡೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಯತಿರಾಜ ಪೆರಾಜೆ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net