`ಉರಿಯ ಗದ್ದುಗೆ' ಕಾದಂಬರಿ ಬಿಡುಗಡೆ

Thontadaryashree-suddidina
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಹಿರೇಮಲ್ಲೂರ ಈಶ್ವರನ್ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸಾಧನಾ ಪಥ ಆಧಾರಿತ `ಉರಿಯ ಗದ್ದುಗೆ' ಕಾದಂಬರಿಯ ತೃತೀಯ ಮುದ್ರಣದ ಬಿಡುಗಡೆ ಕಾರ್ಯಕ್ರಮವನ್ನು ನ. 12ರಂದು ಬೆಳಗ್ಗೆ 11 ಗಂಟೆಗೆ ಇಲ್ಲಿನ ಆಲೂರು ವೆಂಕಟರಾವ್ ಸಭಾಭವನದಲ್ಲಿ ಆಯೋಜಿಸಲಾಗಿದೆ. ಹಿರಿಯ ಸಾಹಿತಿ ಡಾ. ಬಾಳಣ್ಣ ಶೀಗೀಹಳ್ಳಿ ಕಾದಂಬರಿ ಕುರಿತು ಮಾತನಾಡುವರು. ಕೃತಿಕಾರ ಪ್ರೊ. ಬಿ.ಆರ್. ಪೊಲೀಸ್‌ಪಾಟೀಲ ಉಪಸ್ಥಿತರಿರುವರು. ಇದೇವೇಳೆ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ 6ನೇ ಸ್ಮರಣೆ ಅಂಗವಾಗಿ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಸವದತ್ತಿಯ ಸಾಹಿತಿ ಡಾ. ವೈ.ಎಂ. ಯಾಕೊಳ್ಳಿ `ಕನ್ನಡಿಗ- ಕರ್ನಾಟಕತ್ವ' ವಿಷಯ ಕುರಿತು ಉಪನ್ಯಾಸ ನೀಡುವರು. ಮುರುಘಾಮಠದ ಡಾ. ಮಲ್ಲಿಕಾರ್ಜುನ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net