ಪರಿಹಾರ ಧನದ ಪ್ರಯೋಜನ ಪಡೆದುಕೊಳ್ಳಿ

0101
Published on

ಸವದತ್ತಿ: ಲಾಕ್‌ಡೌನ್‌ದಿಂದ ಸಂಕಷ್ಟಕ್ಕೆ ಸಿಲುಕಿದ ಹಡಪದ ಸಮುದಾಯಕ್ಕೆ ರಾಜ್ಯ ಸರ್ಕಾರವು ಸಹಾಯಧನ ಘೋಷಿಸಿದ್ದು, ಪ್ರಯೋಜನ ಪಡೆದುಕೊಳ್ಳಬೇಕು ಎಂದು ವಿಧಾನಸಭಾ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದ್ದಾರೆ.

ಪಟ್ಟಣದ ಶಾಸಕರ ಕಚೇರಿಯಲ್ಲಿ ಶಿವಶರಣ ಹಡಪದ ಸಮುದಾಯದ ಬಡ ಕುಟುಂಬಗಳಿಗೆ ಬುಧವಾರ ಆಹಾರದ ಕಿಟ್ ವಿತರಿಸಿ ಅವರು ಮಾತನಾಡಿದರು. ಲಾಕ್‌ಡೌನ್ ಪರಿಣಾಮ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಎಲ್ಲ ವರ್ಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ಗೊಂದಲವಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿ ಎಂದು ತಿಳಿಸಿದರು.

ಸರ್ಕಾರವು ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯವಹರಿಸಲು ಆದೇಶಿಸಿದ್ದು ಸಾರ್ವಜನಿಕರು ಸಹಕರಿಸಬೇಕು ಎಂದು ತಿಳಿಸಿದರು. ತಹಸೀಲ್ದಾರ್ ಪ್ರಶಾಂತ ಪಾಟೀಲ, ಸುರೇಶ ಆಯಟ್ಟಿ, ಹಡಪದ ಸಮಾಜದ ತಾಲೂಕಾಧ್ಯಕ್ಷ ಅಶೋಕ ಕೊಪ್ಪದ, ಮಲಕಾಜಿ ಹಡಪದ, ವಿನೋದ ಹಡಪದ, ಮೈಲಾರಿ ಹಡಪದ, ಮುತ್ತಪ್ಪ ಹಡಪದ, ವಿರೂಪಾಕ್ಷಿ ಹಡಪದ, ರಾಜು ಹಡಪದ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net