ಕೆಸರಲ್ಲೇ ಓಡಾಡುವ ವಿದ್ಯಾರ್ಥಿಗಳು

mkg1a
Published on

ಸಾಸ್ವೆಹಳ್ಳಿ: ಹೋಬಳಿಯ ರಾಂಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಹೋಗುವ ರಸ್ತೆ ಸಂಪೂರ್ಣ ಹಾಳಾಗಿದ್ದು, ವಿದ್ಯಾರ್ಥಿಗಳು ಅನಿವಾರ್ಯವಾಗಿ ನಿತ್ಯ ಕೆಸರಲ್ಲೇ ಓಡಾಡುವ ಸ್ಥಿತಿ ಎದುರಾಗಿದೆ.

ಕಳೆದೊಂದು ವಾರದಿಂದ ನಿರಂತರ ಜಿಟಿಜಿಟಿ ಮಳೆಯಿಂದ ರಸ್ತೆ ಮತ್ತಷ್ಟು ಹದಗೆಟ್ಟಿದ್ದು, ಓಡಾಡಲು ಬಾರದಂತಹ ಸ್ಥಿತಿ ನಿರ್ಮಾಣವಾಗಿದೆ. ರಸ್ತೆಯಲ್ಲಿ ಟ್ರಾೃಕ್ಟರ್, ಲಾರಿಗಳು ಸಂಚರಿಸುವುದರಿಂದ ರಸ್ತೆ ಹಾಳಾಗಿದ್ದು, ವಿದ್ಯಾರ್ಥಿಗಳು ಶಾಲೆಗೆ ಹೋಗಲು ನಿತ್ಯ ಪರದಾಡುತ್ತಿದ್ದರೂ ಸ್ಥಳೀಯ ಜನಪ್ರತಿನಿಧಿಗಳಾಗಲೀ, ಅಧಿಕಾರಿಗಳಾಗಲೀ ಗಮನಹರಿಸಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರೌಢಶಾಲೆಗೆ ನಿತ್ಯ ಸುತ್ತಮುತ್ತಲ ಗ್ರಾಮಗಳಾದ ಬುಳ್ಳಾಪುರ, ಹೊಟ್ಯಾಪುರ ಹಳ್ಳಿಗಳಿಂದ ಮಕ್ಕಳು ಬರುತ್ತಿದ್ದು, ಇನ್ನಾದರೂ ಸಂಬಂಧಪಟ್ಟವರು ಇತ್ತಕಡೆ ಗಮನಿಸಿ, ರಸ್ತೆ ದುರಸ್ತಿಪಡಿಸಲು ಸ್ಥಳೀಯರು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net