ಲಯನ್ಸ್ ಸಂಸ್ಥೆಯಿಂದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಊಟದ ವ್ಯವಸ್ಥೆ

Lions
Published on

ಬೆಂಗಳೂರು: ಅಂತರಾಷ್ಟ್ರೀಯ ಲಯನ್ಸ ಸಂಸ್ಥೆ ಜಿಲ್ಲೆ 317 ಎಫ್ ವತಿಯಿಂದ ಬೆಂಗಳೂರಿನ ಕೆ. ಸಿ. ಜನರಲ್ ಆಸ್ಪತ್ರೆಯಲ್ಲಿ ರೋಗಿಗಳನ್ನು ನೋಡಿಕೊಳ್ಳುವ ಕುಟುಂಬದ ಸದಸ್ಯರಿಗೆ ನಿತ್ಯ ಊಟದ ವ್ಯವಸ್ಥೆ ಕಲ್ಪಿಸುವ ಯೋಜನೆ ಆರಂಭಿಸಲಾಗಿದೆ.

ಆಸ್ಪತ್ರೆ ಆವರಣದಲ್ಲಿ ಲಯನ್ ಜಿಲ್ಲಾ ಗವರ್ನರ್ ಸಿ.ಎಂ. ನಾರಾಯಣಸ್ವಾಮಿ ಯೋಜನೆಗೆ ಗುರುವಾರ ಚಾಲನೆ ನೀಡಿ ಮಾತನಾಡಿದರು.

ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆ ಅನೇಕ ಸೇವಾ ಕಾರ್ಯಗಳನ್ನು ಮಾಡುತ್ತಿದ್ದು, ಅದರಲ್ಲಿ ಹಸಿದವರಿಗೆ ಊಟ ನೀಡುವ ಯೋಜನೆಯು ಒಂದಾಗಿದೆ. ನಮ್ಮ ಜಿಲ್ಲಾ ಲಯನ್ ಸಂಸ್ಥೆ ಕಳೆದ ನಾಲ್ಕು ವರ್ಷದಿಂದ ಸತತವಾಗಿ ಈ ಕಾರ್ಯಕ್ರಮ ನಡೆಸಿಕೊಂಡು ಬಂದಿರುತ್ತಿದೆ. ಇದರ ಜೊತೆಗೆ ಇನ್ನೂ ಅನೇಕ ಸೇವಾ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಕೊತ್ ಬಾಬಿ ಆಸ್ಪತ್ರೆ ನೌಕರರಿಗೆ ರೈನ್‌ಕೋಟ್ ವಿತರಿಸಿದರು. ಕೆ. ಸಿ. ಜನರಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ಇಂದಿರಾ ಕಬಾಡೇ, ಸ್ಥಾನಿಕ ವೈದ್ಯಾಧಿಕಾರಿ ಡಾ. ಮೋಹನ್, ಡಾ. ಅನುರಾಧ ಆಸ್ಪತ್ರೆ ಸಿಬ್ಬಂದಿ ಹಾಗೂ ಲಯನ್ಸ್ ಸಂಸ್ಥೆಯ ಉಪರಾಜ್ಯಪಾಲ ಆಕಾಶ್ ಸುವರ್ಣ, ರಾಜು ಚಂದ್ರಶೇಖರ್, ಪಿ.ವೇಣುಗೋಪಾಲ್, ಸನತ್ ಕುಮಾರ್, ಶ್ರೀಧರ್ ಹಾಗೂ ಇತರೆ ಸದ್ಯರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net