

ಗಂಗೊಳ್ಳಿ: ಧರ್ಮದ ಆಚರಣೆಯಲ್ಲಿ ವೈವಿಧ್ಯತೆ, ವ್ಯತ್ಯಾಸ ಇದ್ದರೂ ಧರ್ಮ ಎಂದೂ ಒಂದೇ. ಧರ್ಮದ ಆಚರಣೆ ಮಾಡದಿದ್ದವರು ನಾಸ್ತಿಕರು. ಜಗತ್ತಿನ ಸಾಮರಸ್ಯಕ್ಕೆ ಧರ್ಮ ಅವಶ್ಯಕ ಎಂದು ಉಡುಪಿ ಶ್ರೀ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ಸ್ವಾಮೀಜಿ ಹೇಳಿದರು.
ಗಂಗೊಳ್ಳಿ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಸುವರ್ಣ ಮಹೋತ್ಸವ-2024 ಅಂಗವಾಗಿ ಗಂಗೊಳ್ಳಿಯ ಸ.ವಿ. ಪದವಿಪೂರ್ವ ಕಾಲೇಜು ವಠಾರದಲ್ಲಿ ಬುಧವಾರ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಬಸ್ರೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಧರ್ಮದರ್ಶಿ ಬಿ.ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಶ್ರೀಕ್ಷೇತ್ರ ಕುಂಭಾಶಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನ ಆಡಳಿತ ಧರ್ಮದರ್ಶಿ ಎಂ.ದೇವರಾಯ ಶೇರುಗಾರ್ ಸುವರ್ಣ ಸಂಚಿಕೆ ಬಿಡುಗಡೆ ಮಾಡಿದರು. ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಯು.ಎಸ್.ಶೆಣೈ, ಚಂದ್ರ ಗಂಗೊಳ್ಳಿ, ಕಿಶನ್ ಗಂಗೊಳ್ಳಿ, ಡಾ.ಗಣೇಶ ಗಂಗೊಳ್ಳಿ, ನಾಗರಾಜ ಖಾರ್ವಿ ಕಂಚುಗೋಡು, ದಿನೇಶ ಖಾರ್ವಿ ಲೈಟ್‌ಹೌಸ್, ಸಮಿತಿ ಮಾಜಿ ಅಧ್ಯಕ್ಷರು,ದಾನಿಗಳನ್ನು ಸನ್ಮಾನಿಸಲಾಯಿತು.
ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನ ಆಡಳಿತ ಧರ್ಮದರ್ಶಿ ಆನಂದ ಸಿ.ಕುಂದರ್, ಕಚ್ಚೂರು ಶ್ರೀ ಮಾಲ್ತಿದೇವಿ ದೇವಸ್ಥಾನ ಆಡಳಿತ ಧರ್ಮದರ್ಶಿ ಗೋಕುಲದಾಸ, ಗಂಗೊಳ್ಳಿ ಪೇಟೆ ಶ್ರೀ ವಿಠಲ ರಕುಮಾಯಿ ದೇವಸ್ಥಾನ ಆಡಳಿತ ಮೊಕ್ತೇಸರ ಜಿ.ನರಸಿಂಹ ನಾಯಕ್, ಕುಂದಾಪುರ ಶ್ರೀ ಮಹಾಂಕಾಳಿ ದೇವಸ್ಥಾನ ಅಧ್ಯಕ್ಷ ಅಜಂತಾ ಖಾರ್ವಿ ಶುಭಾಶಂಸನೆಗೈದರು. ಮಹಿಳಾ ಮಂಡಳಿ ಅಧ್ಯಕ್ಷೆ ಸವಿತಾ ಯು.ದೇವಾಡಿಗ, ಸಮಿತಿ ಪ್ರಧಾನ ಕಾರ್ಯದರ್ಶಿ ನಿತಿನ್ ಖಾರ್ವಿ, ಕಾರ್ಯದರ್ಶಿ ಶ್ರೀಧರ ಸಕ್ಲಾತಿ, ಪುರೋಹಿತ ಜಿ.ರಾಘವೇಂದ್ರ ಆಚಾರ್ಯ ಉಪಸ್ಥಿತರಿದ್ದರು. ಗೌರವಾಧ್ಯಕ್ಷ್ಷ ಬಿ.ಲಕ್ಷ್ಮೀಕಾಂತ ಮಡಿವಾಳ ಸ್ವಾಗತಿಸಿದರು. ಅಧ್ಯಕ್ಷ ಸತೀಶ ಜಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಂದರ ಜಿ. ಕಾರ್ಯಕ್ರಮ ನಿರೂಪಿಸಿದರು.