ಧರ್ಮ ಕಾರ್ಯಗಳಿಗೆ ಭಕ್ತರ ಸಹಕಾರ ಅಗತ್ಯ

16-3-2024 KADENANDIHALLI (1)
ಸೇವಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಕಡೇನಂದಿಹಳ್ಳಿ ಶ್ರೀಗಳು ಆಶೀರ್ವಚನ ನೀಡಿದರು. ಎನ್.ವಿ.ಈರೇಶ್ ಇತರರಿದ್ದರು.
Published on

ಕಡೇನಂದಿಹಳ್ಳಿ: ಭಕ್ತರ ಸಹಾಯ ಸಹಕಾರವಿದ್ದರೆ ಎಂತಹ ಕಾರ್ಯಕ್ರಮಗಳನ್ನಾದರೂ ಆಯೋಜಿಸಬಹುದೆಂಬ ಆತ್ಮವಿಶ್ವಾಸ ತಮ್ಮಲ್ಲಿ ಮೂಡಿದೆ ಎಂದು ಕಡೇನಂದಿಹಳ್ಳಿ ತಪೋಕ್ಷೇತ್ರದ ಶ್ರೀ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಕಡೇನಂದಿಹಳ್ಳಿ: ಭಕ್ತರ ಸಹಾಯ ಸಹಕಾರವಿದ್ದರೆ ಎಂತಹ ಕಾರ್ಯಕ್ರಮಗಳನ್ನಾದರೂ ಆಯೋಜಿಸಬಹುದೆಂಬ ಆತ್ಮವಿಶ್ವಾಸ ತಮ್ಮಲ್ಲಿ ಮೂಡಿದೆ ಎಂದು ಕಡೇನಂದಿಹಳ್ಳಿ ತಪೋಕ್ಷೇತ್ರದ ಶ್ರೀ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಶುಕ್ರವಾರ ಶ್ರೀ ಮಠದಲ್ಲಿ ಹಮ್ಮಿಕೊಂಡಿದ್ದ ಸೇವಾರ್ಥಿಗಳಿಗೆ, ಭಕ್ತರಿಗೆ ಮತ್ತು ಸಮಿತಿಯ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಶ್ರೀ ಗುರು ರೇವಣಸಿದ್ಧೇಶ್ವರ ಪುಣ್ಯಾಶ್ರಮದಲ್ಲಿ ಫೆ.2ರಿಂದ 13ರವರೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ 33ನೇ ವರ್ಧಂತಿ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯರ 36 ಅಡಿ ಎತ್ತರದ ಬೃಹತ್ ಮೂರ್ತಿ ಲೋಕಾರ್ಪಣೆ ಅಂಗವಾಗಿ ಶ್ರೀ ಜಗದ್ಗುರು ರೇಣುಕಾಚಾರ್ಯ ಪುರಾಣ ಪ್ರವಚನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಅಲ್ಲದೇ ಶ್ರೀ ಮಠದಿಂದ ಪ್ರಥಮ ಬಾರಿಗೆ ಶ್ರೀ ರಂಭಾಪುರಿ ಜಗದ್ಗುರು ರೇವಣಸಿದ್ಧೇಶ್ವರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಈ ಎಲ್ಲ ಕಾರ್ಯಕ್ರಮಗಳನ್ನು ನೋಡಿದ ಶ್ರೀಮದ್ ರಂಭಾಪುರಿ ಜಗದ್ಗುರುಗಳು ತಮ್ಮ ಹರುಷ ವ್ಯಕ್ತಪಡಿಸಿದ್ದಾರೆ. ಎಲ್ಲ ಕಾರ್ಯಕ್ರಮಗಳು ಯಶಸ್ವಿಯಾಗಿ ಜರುಗಿದ್ದರೆ ಅದಕ್ಕೆ ಭಕ್ತರ ಸಹಕಾರವೇ ಕಾರಣ. ಭಕ್ತರೇ ಶ್ರೀ ಮಠದ ಆಸ್ತಿಯಾಗಿದ್ದು ಧರ್ಮ ಕಾರ್ಯಗಳಿಗೆ ಭಕ್ತರ ಸಹಕಾರ ಅಗತ್ಯವಾಗಿದೆ ಎಂದರು.
ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳುವ ರಚನಾತ್ಮಕ ಕಾರ್ಯಗಳಿಗೆ ಭಕ್ತರು ಹೀಗೆಯೇ ಸಹಕಾರ ನೀಡುವರೆಂಬ ಆತ್ಮವಿಶ್ವಾಸ ತಮ್ಮದಾಗಿದೆ ಎಂದರು. ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕ ಘಟಕದ ಅಧ್ಯಕ್ಷ ಎನ್.ವಿ.ಈರೇಶ್, ಶ್ರೀ ಗುರು ರೇವಣಸಿದ್ಧೇಶ್ವರ ಜನಕಲ್ಯಾಣ ಟ್ರಸ್ಟ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು. ಎಲ್ಲ ಸೇವಾರ್ಥಿಗಳಿಗೆ ಶ್ರೀ ಮಠದಿಂದ ಶಾಲು ಹೊದಿಸಿ ಸ್ಮರಣಿಕೆ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net