ಕಾಲ ಕಾಲಕ್ಕೆ ಧರ್ಮ ಜಾಗೃತಿ ಅಗತ್ಯ

shrinivas
Published on

ಕೋಟ: ಧಾರ್ಮಿಕ ಹಾಗೂ ಸಾಂಸ್ಕೃತಿಕ ನಗರಿಯಾಗಿ ಗುರುತಿಸಿಕೊಂಡ ಹದಿನಾಲ್ಕು ಗ್ರಾಮಗಳ ಕೇಂದ್ರದಲ್ಲಿ ಲೋಕಕಲ್ಯಾಣಾರ್ಥವಾಗಿ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾಲ ಕಾಲಕ್ಕೆ ಧರ್ಮ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ಸಾಸ್ತಾನ ಪಾಂಡೇಶ್ವರ ಯೋಗಗುರುಕುಲ ಮುಖ್ಯಸ್ಥ ಡಾ.ವಿದ್ವಾನ್ ವಿಜಯ ಮಂಜರ್ ಹೇಳಿದರು.

ಏ.2, 3ರಂದು ಸಾಲಿಗ್ರಾಮ ಹಳೆಕೋಟೆ ಮೈದಾನದಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವದ ಕುರಿತು ಸಾಸ್ತಾನದಲ್ಲಿ ಮಂಗಳವಾರ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಮಾತನಾಡಿದರು.

ಸಮಿತಿ ಪ್ರಧಾನ ಕಾರ್ಯದರ್ಶಿ ಐರೋಡಿ ವಿಠ್ಠಲ್ ಪೂಜಾರಿ ಪದಾಧಿಕಾರಿಗಳ ಪಟ್ಟಿ ವಾಚಿಸಿ ವಿವಿಧ ಸ್ತರದ ತಂಡಗಳ ರಚನೆ ಬಗ್ಗೆ ಮಾಹಿತಿ ನೀಡಿದರು. ಸಮಿತಿ ಅಧ್ಯಕ್ಷ ಎಂ.ಸಿ.ಚಂದ್ರಶೇಖರ್, ಸಂಚಾಲಕ ಪ್ರತಾಪ್ ಶೆಟ್ಟಿ ಸಾಸ್ತಾನ, ಮಹಿಳಾ ಸಮಿತಿ ಪ್ರಮುಖರಾದ ಲಿಲಾವತಿ ಗಂಗಾಧರ್, ಸಮಿತಿ ಪ್ರಮುಖರಾದ ಎಂ.ಸುಬ್ರಾಯ ಆಚಾರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net