

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಸಾರಸ್ವತಪುರದ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯಿಂದ ಶ್ರೀ ಮಾರುತಿ ದೇವಸ್ಥಾನದ ಆವರಣದಲ್ಲಿ ಡಿ. 25ರಿಂದ 31ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 25ರಂದು ಬೆಳಗ್ಗೆ ಗಣಹೋಮ, 26ರಂದು ಸಂಜೆ 6ಕ್ಕೆ ಮಂಡಲ ಪೂಜೆ, ಪಡಿಪೂಜೆ, 28ರಂದು ಸಂಜೆ 5ಕ್ಕೆ ಅಯ್ಯಪ್ಪ ಸ್ವಾಮಿಯ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ. 31ರಂದು ಬೆಳಗ್ಗೆ 9ಕ್ಕೆ ಮಹಾಪೂಜೆ ಹಾಗೂ ಮಧ್ಯಾಹ್ನ 12ರಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಜನವರಿಯಲ್ಲಿ ಮಾಲಾಧಾರಿಗಳು ಶಬರಿಮಲೈ ಯಾತ್ರೆಗೆ ಹೊರಡಲಿದ್ದಾರೆ. ಭಕ್ತರು ಶ್ರೀ ಅಯ್ಯಪ್ಪ ಸ್ವಾಮಿಗೆ ತುಪ್ಪದ ಕಾಯಿ ಹಾಗೂ ಮಾಳಿಗೆ ಪುರತ್ತಮ್ಮ ದೇವಿಗೆ ಖಣ ನೀಡಬಹುದು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದು ಗುರುಸ್ವಾಮಿ ದಿಲೀಪ ಕಡವೆ ತಿಳಿಸಿದ್ದಾರೆ.