

ಹುಬ್ಬಳ್ಳಿ: ಸುಳ್ಳ ಗ್ರಾಮದ ಪಂಚಗೃಹ ಹಿರೇಮಠದ ಶ್ರೀ ಗುರು ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಸೆ.18 ರಂದು ಸಂಜೆ 6 ಗಂಟೆಗೆ ಸಿದ್ದರಾಮೇಶ್ವರ ಪುರಾಣ ಮಂಗಲೋತ್ಸವ ಹಾಗೂ ಬಾಳೆಹೊನ್ನುರು ಶ್ರೀ ರಂಭಾಪುರಿ ಜಗದ್ಗುರುಗಳ ಕುರಿತ ದತ್ತಿ ಉಪನ್ಯಾಸದ ಉದ್ಘಾಟನೆ ಹಾಗೂ ಧರ್ಮ ಜಾಗೃತಿ ಸಭೆ ಆಯೋಜಿಸಲಾಗಿದೆ.
ಶ್ರೀ ಪಂಚಗೃಹ ಹಿರೇಮಠ, ಧಾರವಾಡ ವೀರಶೈವ ಜಂಗಮ ಸಂಸ್ಥೆ, ಕನ್ನಡ ಸಾಹಿತ್ಯ ಪರಿಷತ್ತು ಹುಬ್ಬಳ್ಳಿ ಗ್ರಾಮೀಣ ಘಟಕ, ಪೊ›. ಮಾಲತಿ ಹಿರೇಮಠ ಟ್ರಸ್ಟ್ಗಳ ಸಂಯುಕ್ತ ಆಶ್ರಯದಲ್ಲಿ ನಡೆಯಲಿದೆ.
ಬಾಳೆಹೊನ್ನೂರು ಶ್ರೀ ರಂಭಾಪುರಿ ವೀರಸೋಮೇಶ್ವರ ಜಗದ್ಗುರುಗಳು ಸಾನ್ನಿಧ್ಯ ವಹಿಸುವರು. ಶ್ರೀ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು ಉದ್ಘಾಟಿಸುವರು. ಪಂಚಗೃಹ ಹಿರೇಮಠದ ಶ್ರೀ ಶಿವಸಿದ್ಧರಾಮೇಶ್ವರ ಶಿವಾಚಾರ್ಯರು ಅಧ್ಯಕ್ಷತೆ ವಹಿಸುವರು. ಶ್ರೀ ವಿಮಲ ರೇಣುಕ ವಿಮುಕ್ತಿಮುನಿ ಶಿವಾಚಾರ್ಯರು ನೇತೃತ್ವ ವಹಿಸಲಿದ್ದಾರೆ.
ಶ್ರೀ ಗುರುಸಿದ್ದೇಶ್ವರ ಶಿವಾಚಾರ್ಯರು, ಶ್ರೀ ರೇವಣಸಿದ್ದ ಶಿವಾಚಾರ್ಯರು, ಶ್ರೀ ಉಮೇಶ್ವರ ಶಿವಾಚಾರ್ಯರು, ಶ್ರೀ ಅಭಿನವ ಶಾಂತಲಿಂಗ ಶಿವಾಚಾರ್ಯರು ಉಪದೇಶಾಮೃತ ನಡೆಸಿಕೊಡುವರು.
ಡಾ. ಎ.ಸಿ.ವಾಲಿ ಗುರೂಜಿ ಅವರು ಪ್ರಥಮ ದತ್ತಿ ಉಪನ್ಯಾಸ ನೀಡುವರು. ಶಾಸಕರಾದ ಎನ್. ಎಚ್. ಕೋನರಡ್ಡಿ, ವಿನಯ ಕುಲಕರ್ಣಿ, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ ಅಸೂಟಿ, ಜಿಪಂ ಮಾಜಿ ಉಪಾಧ್ಯಕ್ಷ ಶಿವಾನಂದ ಕರಿಗಾರ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.