ನಾಡು ನುಡಿಗೆ ಶ್ರಮಿಸಿದವರನ್ನು ಸ್ಮರಿಸಿ

FotoJet
Published on

ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಸಲಹೆ | ಕನ್ನಡ ಜ್ಯೋತಿ ರಥಯಾತ್ರೆಗೆ ಸ್ವಾಗತ

 ಚಿಕ್ಕಬಳ್ಳಾಪುರ : ದೇಶ, ಕನ್ನಡ ನಾಡು ನುಡಿ ಅಭಿವದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಮಹನೀಯರ ಕೊಡುಗೆಗಳನ್ನು ಸ್ಮರಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.

ನಗರದ ಒಕ್ಕಲಿಗರ ಕಲ್ಯಾಣ ಮಂಟಪದ ಮುಂಭಾಗದಲ್ಲಿ ಜಿಲ್ಲಾಡಳಿತ ಮತ್ತು ಜಿಪಂ, ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಯೋಗದೊಂದಿಗೆ ಬುಧವಾರ ಕನ್ನಡ ಜ್ಯೋತಿ ರಥ ಯಾತ್ರೆಯನ್ನು ಸ್ವಾಗತಿಸಿ ವಾತನಾಡಿದರು.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಂತ ಕನ್ನಡ ಜ್ಯೋತಿ ರಥಯಾತ್ರೆ ಸಂಚರಿಸಿ, ಕನ್ನಡ ನಾಡು, ನುಡಿ, ಸಂಸ್ಕೃತಿಯ ಮಹತ್ವದ ಬಗ್ಗೆ ಜಾಗತಿ ಮೂಡಿಸುತ್ತಿದೆ ಎಂದರು

ಅನೇಕ ಕವಿಗಳು, ವಿಚಾರವಂತರು ದೇಶೀಯ ಸಾಹಿತ್ಯ ಹಾಗೂ ಕನ್ನಡ ಸಾಹಿತ್ಯ ಲೋಕಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇದನ್ನು ಸ್ಮರಿಸಿ, ನಾಡು ನುಡಿಯನ್ನು ಬೆಳೆಸಬೇಕಾಗಿರುವುದು ಕನ್ನಡಿಗರ ಪ್ರಮುಖ ಕರ್ತವ್ಯ ಎಂದರು.

ಅಪರ ಜಿಲ್ಲಾಧಿಕಾರಿ ಎನ್.ಭಾಸ್ಕರ್, ನಗರಸಭೆ ಅಧ್ಯಕ್ಷ ಎ.ಗಜೇಂದ್ರ, ಉಪಾಧ್ಯಕ್ಷ ಜೆ.ನಾಗರಾಜ್, ತಹಸೀಲ್ದಾರ್ ಎಂ.ಅನಿಲ್, ತಾಪಂ ಇಒ ಮಂಜುನಾಥ್, ಸವಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶೇಷಾದ್ರಿ ಮತ್ತಿತರರು ಇದ್ದರು.

ಪ್ರಮುಖ ರಸ್ತೆಗಳಲ್ಲಿ ಸಂಚಾರ

ರಥಯಾತ್ರೆ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಿಂದ ಆರಂಭವಾಗಿ ಬಿ.ಬಿ ರಸ್ತೆ, ಶಿಡ್ಲಟ್ಟ ವತ್ತ, ಎಂ.ಜಿ ರಸ್ತೆಯ ಮೂಲಕ ಡಿ.ವೈ.ಎಸ್.ಪಿ ಕಚೇರಿ, ಅಂಬೇಡ್ಕರ್ ಭವನ, ಉಪ ವಿಭಾಗಾಧಿಕಾರಿಗಳ ಕಚೇರಿಯವರೆಗೂ ಸಾಗಿತು. ಮಹಿಳೆಯರು ಪೂರ್ಣಕುಂಭ ಕಳಸದೊಂದಿಗೆ ಯಾತ್ರೆಯನ್ನು ಸ್ವಾಗತಿಸಿದರು. ಜಾನಪದ ಕಲಾ ತಂಡಗಳ ಪ್ರದರ್ಶನ ಮೆರವಣಿಗೆಯ ಮೆರುಗು ಹೆಚ್ಚಿಸಿತ್ತು. ಸಾರ್ವಜನಿಕರು, ಕನ್ನಡ ಪರ ಸಂಘಟನೆಗಳ ಮುಖಂಡರು, ಸಾಹಿತಿಗಳು, ವಿದ್ಯಾರ್ಥಿಗಳು ರಥಕ್ಕೆ ಪುಷ್ಪ ನಮನ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net