

ಪಡುಬಿದ್ರಿ: ಶಿಕ್ಷಣ ಕ್ಷೇತ್ರಕ್ಕೆ ವಿಬುಧೇಶ ತೀರ್ಥರ ಕೊಡುಗೆ ಅನನ್ಯವಾದುದು. ಶಿಸ್ತುಬದ್ಧವಾದ ದೇಶಪ್ರೇಮ ಬೆಳೆಸುವ ಶಿಕ್ಷಣದಿಂದ ಮಾತ್ರ ದೇಶ ಅಭಿವೃದ್ಧಿ ಸಾಧ್ಯವೆಂದು ಅವರು ಭಾವಿಸಿದ್ದರು ಎಂದು ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ನಿವೃತ್ತ ಪ್ರಾಚಾರ್ಯ ನಾರಾಯಣ ಹೆಬ್ಬಾರ್ ಹೇಳಿದರು.
ಪಡುಬಿದ್ರಿ ಶ್ರೀ ಬ್ರಹ್ಮವಿದ್ಯಾ ಪ್ರಕಾಶಿನಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ಗುರುವಾರ ಶ್ರೀ ವಿಬುಧೇಶ ತೀರ್ಥ ಶ್ರೀಪಾದರ ಸಂಸ್ಮರಣೆ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪಡುಬಿದ್ರಿ ಗಣಪತಿ ಪ್ರೌಢಶಾಲೆ ನಿಕಟಪೂರ್ವ ಮಾಜಿ ಕಾರ್ಯದರ್ಶಿ ರಾಘವೇಂದ್ರ ನಾವುಡ, ಪ್ರೌಢಶಾಲಾ ಮುಖ್ಯಶಿಕ್ಷಕಿ ಅನುರಾಧಾ.ಪಿ.ಎಸ್. ಸ್ವಾಗತಿಸಿದರು. ಅಧ್ಯಾಪಕ ರಾಘವೇಂದ್ರ ರಾವ್ ನಿರೂಪಿಸಿದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಅಶೋಕ ಕೆ. ವಂದಿಸಿದರು.