ಅಯ್ಯಪ್ಪ ಕಾಲನಿ ಬಳಿ ಅಕ್ರಮ ಶೆಡ್‌ಗಳ ತೆರವು

ಸೋಮವಾರಪೇಟೆ ಸಮೀಪದ ಕಿಬ್ಬೆಟ್ಟ ಅಯ್ಯಪ್ಪ ಕಾಲನಿ ಸಮೀಪ ಅರಣ್ಯ ಇಲಾಖೆಯ ಜಾಾಗದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಶೆಡ್‌ಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ತೆರವುಗೊಳಿಸಿ, ಗ್ರಾಮಸ್ಥರೊಂದಿಗೆ ಚರ್ಚಿಸಿದರು. ಅಭಿಷೇಕ್, ಗೋಪಾಲ್, ಶೈಲೇಂದ್ರ ಇದ್ದರು.
ಸೋಮವಾರಪೇಟೆ ಸಮೀಪದ ಕಿಬ್ಬೆಟ್ಟ ಅಯ್ಯಪ್ಪ ಕಾಲನಿ ಸಮೀಪ ಅರಣ್ಯ ಇಲಾಖೆಯ ಜಾಾಗದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಶೆಡ್‌ಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ತೆರವುಗೊಳಿಸಿ, ಗ್ರಾಮಸ್ಥರೊಂದಿಗೆ ಚರ್ಚಿಸಿದರು. ಅಭಿಷೇಕ್, ಗೋಪಾಲ್, ಶೈಲೇಂದ್ರ ಇದ್ದರು.
Published on

ಸೋಮವಾರಪೇಟೆ: ಸಮೀಪದ ಕಿಬ್ಬೆಟ್ಟ ಗ್ರಾಮದ ಅಯ್ಯಪ್ಪ ಕಾಲನಿ ಸಮೀಪ ಕಳೆದ ಮೂರು ದಿನಗಳ ಹಿಂದೆ ನಿರ್ಮಿಸಿದ್ದ ಶೆಡ್‌ಗಳನ್ನು ಬುಧವಾರ ಅರಣ್ಯ ಇಲಾಖಾ ಸಿಬ್ಬಂದಿ ತೆರವುಗೊಳಿಸಿದ್ದಾರೆ.

ಚೌಡ್ಲು ಗ್ರಾಮ ಪಂಚಾಯಿತಿಗೆ ಸೇರಿದ ಅಯ್ಯಪ್ಪ ಕಾಲನಿಯಲ್ಲಿರುವ ಸರ್ವೇ ನಂ. 56/1ರಲ್ಲಿನ ಜಾಗ ಅರಣ್ಯ ಇಲಾಖೆ-ಗ್ರಾಮಸ್ಥರು ಎಂದು ಆರ್‌ಟಿಸಿಯಲ್ಲಿ ಬರುತ್ತಿದ್ದು, ಈ ಜಾಗದಲ್ಲಿ ಸ್ಥಳೀಯರಾದ ಕಿಟ್ಟು ಹಾಗೂ ವಸಂತ್ ಎಂಬವರು ಶೆಡ್‌ಗಳನ್ನು ನಿರ್ಮಿಸಿ ವಾಸಕ್ಕೆ ಮುಂದಾಗಿದ್ದರು. ಈ ಬಗ್ಗೆ ಮಾಹಿತಿ ಪಡೆದ ಡಿಸಿಎಫ್ ಅಭಿಷೇಕ್, ಎಸಿಎಫ್ ಗೋಪಾಲ್, ಆರ್‌ಎಫ್‌ಒ ಶೈಲೇಂದ್ರಕುಮಾರ್, ಉಪ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಅವರು ಸ್ಥಳಕ್ಕೆ ಭೇಟಿ ನೀಡಿ, ಶೆಡ್ ನಿರ್ಮಿಸುತ್ತಿರುವ ಜಾಾಗ ಅರಣ್ಯಕ್ಕೆ ಸೇರಿದ್ದು, ಇಲ್ಲಿ ಅತಿಕ್ರಮಣ ಮಾಡಬಾರದು ಎಂದರು.

ಅರಣ್ಯ ಜಾಗದ ಅತಿಕ್ರಮಣವಾದರೆ ಕಾನೂನು ಪ್ರಕಾರ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದ ಅರಣ್ಯ ಇಲಾಖೆಯ ಸಿಬ್ಬಂದಿ, ಎರಡು ಶೆಡ್‌ಗಳನ್ನು ತೆರವುಗೊಳಿಸಿದರು. ಕಳೆದ ಮೂರು ದಿನಗಳಿಂದ ಈ ಜಾಗದಲ್ಲಿ ಶೆಡ್ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಇಂದು ಕೆಲವರು ಉಳಿದ ಜಾಗದಲ್ಲಿ ಕಾಡು ಕಡಿದು ಶೆಡ್ ನಿರ್ಮಿಸಿಕೊಳ್ಳಲು ಮುಂದಾದ ಸಂದರ್ಭ ಅಧಿಕಾರಿಗಳು ತಡೆಯೊಡ್ಡಿದ ತೆರವುಗೊಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net