ಶಿವಾನಂದ ಪಾಟೀಲ್‌ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ

28-12-Shiva-1
ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಸಚಿವ ಶಿವಾನಂದ ಪಾಟೀಲ್‌ರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿ ರಾಯಚೂರಿನ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಗುರುವಾರ ಮನವಿ ಸಲ್ಲಿಸಲಾಯಿತು. ಸಂಘದ ಕಾರ್ಯಾಧ್ಯಕ್ಷ ಸಂಗಮೇಶ ನಾಯಕ, ಪದಾಕಾರಿಗಳಾದ ಹನುಮೇಶ ನಾಯಕ, ಮಲ್ಲನಗೌಡ, ವೆಂಕಟೇಶ, ಶಿವಶಂಕರ, ಬುಜ್ಜಯ್ಯ, ದ್ಯಾವಣ್ಣ ಇದ್ದರು.
Published on

ರಾಯಚೂರು: ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಸಚಿವ ಶಿವಾನಂದ ಪಾಟೀಲ್‌ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಿಸಿದೆ.
ಸಂಘದ ನಿಯೋಗ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಗುರುವಾರ ಮನವಿ ಸಲ್ಲಿಸಿ, ಈ ಹಿಂದೆಯೂ ಶಿವಾನಂದ ಪಾಟೀಲ್ ರೈತ ಆತ್ಮಹತ್ಯೆ ಬಗ್ಗೆಯೂ ವಿವಾದಾತ್ಮಕ ಹೇಳಿಕೆ ನೀಡಿದ್ದು, ಈಗ ಪುನಃ ರೈತರ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ ಎಂದು ದೂರಿದರು.
ಕಾರ್ಯಕ್ರಮವೊಂದರಲ್ಲಿ ಶಿವಾನಂದ ಪಾಟೀಲ್ ರೈತರು ಬರಗಾಲ ಬರಲಿ, ಸಾಲಮನ್ನಾ ಆಗಲಿ ಎಂದು ಇಚ್ಚಿಸುತ್ತಾರೆ ಎಂದು ಹೇಳಿಕೆ ನೀಡುವ ಮೂಲಕ ರೈತರಿಗೆ ಅಪಮಾನ ಮಾಡಿದ್ದಾರೆ. ಕೇವಲ ಕ್ಷಮೆ ಕೇಳಿದರೆ ಸಾಲದು ಮುಖ್ಯಮಂತ್ರಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಸಂಘದ ಕಾರ್ಯಾಧ್ಯಕ್ಷ ಸಂಗಮೇಶ ನಾಯಕ, ಪದಾಕಾರಿಗಳಾದ ಹನುಮೇಶ ನಾಯಕ, ಮಲ್ಲನಗೌಡ, ವೆಂಕಟೇಶ, ಶಿವಶಂಕರ, ಬುಜ್ಜಯ್ಯ, ದ್ಯಾವಣ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net