

ಚನ್ನರಾಯಪಟ್ಟಣ: ಪಟ್ಟಣದಲ್ಲಿರುವ ಎಲ್ಲ ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಕೊರತೆಯಾಗದಂತೆ ಕ್ರಮ ವಹಿಸಿದ್ದೇವೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.
ಪಟ್ಟಣದ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಸೋಮವಾರ ಅಲ್ಪಸಂಖ್ಯಾತರ ಇಲಾಖೆ ಅನುದಾನದಲ್ಲಿ ಅಂದಾಜು 56 ಲಕ್ಷ ರೂ. ವೆಚ್ಚದಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದ ಸುಧಾರಣೆ ನಮ್ಮ ಪ್ರಥಮ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದ್ದೇವೆ. ನೂತನ ಕೊಠಡಿಗಳ ನಿರ್ಮಾಣದ ಜತೆಗೆ ಕಿರಿಯ ಪ್ರಾಥಮಿಕ ಶಾಲೆ ನವೀಕರಣಕ್ಕೆ ಕ್ರಮವಹಿಸಿ ಅಲ್ಪಸಂಖ್ಯಾತರಿಗೆ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕಲ್ಪಿಸಲಾಗಿದೆ ಎಂದರು.
ಪುರಸಭೆಯ ಶಿಕ್ಷಣ ನಿಧಿಯನ್ನು ಬಳಸಿಕೊಳ್ಳಲು ಅವಕಾಶವಿದ್ದು, ಶೀಘ್ರ ಅನುಮೋದನೆ ಕೊಡಿಸಿ ಕಾಮಗಾರಿ ಪೂರ್ಣಗೊಳಿಸಿ. ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸಬೇಕು. ಮಕ್ಕಳು ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಸತ್ಪ್ರಜೆಗಳಾಬೇಕು ಎಂದು ತಿಳಿಸಿದರು.
ಪುರಸಭಾ ಮಾಜಿ ಅಧ್ಯಕ್ಷ ಆನ್ಸರ್ ಬೇಗ್, ಸದಸ್ಯ ಆನ್ಸರ್ ಪಾಷಾ, ಸೈಯದ್ ಅಹ್ಮದ್, ಮುಖಂಡರಾದ ಜಬಿವುಲ್ಲಾ ಬೇಗ್, ಮಹಬೂಬ್, ತಂಜೀಮ್, ಚಾಂದ್ ಪಾಷಾ, ಗುತ್ತಿಗೆದಾರರಾದ ವೇಣು, ರಾಘು, ಅಜೀರ್ ಖಾನ್, ಪ್ರಾಂಶುಪಾಲ ನಟರಾಜ್ ಇತರರಿದ್ದರು.