ಅರಬಾವಿ ಪಪಂಗೆ ರೇಣುಕಾ ಅಧ್ಯಕ್ಷೆ, ರಾಜಶ್ರೀ ಉಪಾಧ್ಯಕ್ಷೆ

web3
ಅರಬಾವಿ ಪಪಂ ನೂತನ ಅಧ್ಯಕ್ಷೆ ರೇಣುಕಾ ಮಾದರ, ಉಪಾಧ್ಯಕ್ಷೆ ರಾಜಶ್ರೀ ಗಂಗನ್ನವರ, ಸದಸ್ಯರನ್ನು ಸನ್ಮಾನಿಸಲಾಯಿತು. ಪರಶುರಾಮ ನಾಯಕ, ದಾಸಪ್ಪ ನಾಯಿಕ, ಸಿ.ಪಿ. ಯಕ್ಸಂಬಿ ಇತರರಿದ್ದರು.
Published on

ಮೂಡಲಗಿ: ತಾಲೂಕಿನ ಅರಬಾವಿ ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷೆಯಾಗಿ ರೇಣುಕಾ ಮಾದರ, ಉಪಾಧ್ಯಕ್ಷೆಯಾಗಿ ರಾಜಶ್ರೀ ಗಂಗನ್ನವರ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆದ ತಹಸೀಲ್ದಾರ್ ಮಹಾದೇವ ಸನ್ನಮುರಿ ಪ್ರಕಟಿಸಿದರು.

ಪಪಂ ಸಭಾಭವನದಲ್ಲಿ ಶುಕ್ರವಾರ ಜರುಗಿದ ಚುನಾವಣೆ ಪ್ರಕ್ರಿಯೆಯಲ್ಲಿ ಎರಡೂ ಸ್ಥಾನಗಳಿಗೆ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧ ಆಯ್ಕೆ ನಡೆದಿದೆ. ಅಧ್ಯಕ್ಷ ಸ್ಥಾನ ಪಜಾ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ಅ ವರ್ಗ ಮಹಿಳೆಗೆ ಮೀಸಲಾಗಿತ್ತು. ತಹಸೀಲ್ದಾರ್ ಕಚೇರಿ ಶಿರಸ್ತೆದಾರ ಪರಶುರಾಮ ನಾಯಕ, ದಾಸಪ್ಪ ನಾಯಿಕ, ಸಿ.ಪಿ. ಯಕ್ಸಂಬಿ ಇತರರಿದ್ದರು.

ನೂತನ ಅಧ್ಯಕ್ಷ-ಉಪಾಧ್ಯಕ್ಷರು ಪಟ್ಟಣದ ಅಭಿವೃದ್ಧಿಗೆ ಸದಸ್ಯರು ಮತ್ತು ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶ್ರಮಿಸಬೇಕು. ಮೂಲ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು. ಪಕ್ಷ ಭೇದ ಮರೆತು ಅಭಿವೃದ್ಧಿಗೆ ದುಡಿಯಬೇಕು. ಅರಬಾವಿ ಪಟ್ಟಣದ ಪ್ರಗತಿಗಾಗಿ ಸರ್ಕಾರದ ವಿವಿಧ ಯೋಜನೆಗಳನ್ನು ಅನುಷ್ಠಾನ ಮಾಡುವೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net