ರೇಣುಕಸ್ವಾಮಿ ದೇಹ ಪೋಸ್ಟ್‌ ಮಾರ್ಟಮ್‌ ಮಾಡಿದ ವೈದ್ಯ ಪವಿತ್ರ ಗೌಡ ಸ್ನೇಹಿತೆಯ ಪತಿ!; ಕೇಸ್​ಗೆ ಸಿಗುತ್ತಾ ಬಿಗ್ ಟ್ವಿಸ್ಟ್

darshan (1)
Published on

ಬೆಂಗಳೂರು: ರೇಣುಕಸ್ವಾಮಿ ಶವ ಪೋಸ್ಟ್‌ ಮಾರ್ಟಮ್‌ ನಡೆಸಿದ ವೈದ್ಯ ಬೇರೆ ಯಾರೂ ಅಲ್ಲ,  ದರ್ಶನ್‌ ಹಾಗೂ ಪವಿತ್ರ ಗೌಡ ಅವರನ್ನು ಭೇಟಿಯಾಗಿದ್ದ ಪವಿತ್ರ ಆಪ್ತೆ ಸಮತ ಅವರ ಪತಿ ಎನ್ನುವ ಸುದ್ದಿಯೊಂದು ಸೋಶಿಯಲ್​​ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಪವಿತ್ರಗೌಡ ಸ್ನೇಹಿತೆ ಸಮತ. ಕೊಲೆ ಕೇಸ್‌ನಲ್ಲಿ ಜೈಲುಪಾಲಾಗಿರುವ ಪವಿತ್ರ ಗೌಡ ಮಾತ್ರವಲ್ಲದೇ ದರ್ಶನ್ ಜೊತೆಗೂ ಮಾತುಕತೆ ನಡೆಸಿದ್ದಳು. ಸಮತಳ ಜೈಲು ಭೇಟಿಯಿಂದ ತನಿಖಾಧಿಕಾರಿಗಳ ತಲೆಯಲ್ಲಿ ಅನುಮಾನ ಮೂಡಿತ್ತು. ಡೌಟ್ ಹಿನ್ನೆಲೆಯಲ್ಲಿ, ವಿಚಾರಣೆಗೆ ಹಾಜರಾಗುವಂತೆ ತನಿಖಾಧಿಕಾರಿ ನೋಟೀಸ್ ನೀಡಿದ್ದರು.  ಈ ವೇಳೆ ಒಂದು ಮಾಹಿತಿ ಪೊಲೀಸರಿಗೆ ದೊರೆತಿದೆ.

ರೇಣುಕಸ್ವಾಮಿಯ ಶವ ಪೋಸ್ಟ್‌ಮಾರ್ಟಮ್ ಮಾಡಿದ್ದೇ ಸಮತಳ ಪತಿ. ಡಾ. ಸುರೇಶ್ ಅವರಿಂದ ರೇಣುಕಾ ಸ್ವಾಮಿ ಶವದ ಮರಣೋತ್ತರ ಪರೀಕ್ಷೆ ನಡೆದಿತ್ತು. ಆ ಮರಣೋತ್ತರ ಪರೀಕ್ಷೆ ಪೊಲೀಸರ ಕೈ ಸೇರುವ ಮೊದಲೇ ಜೈಲಿನಲ್ಲಿ ದರ್ಶನ್ ಹಾಗೂ ಪವಿತ್ರರನ್ನು ಸಮತ ಭೇಟಿ ಮಾಡಿದ್ದಳು. ರೇಣುಕಾ ಸ್ವಾಮಿ ಶವ ಮರಣೋತ್ತರ ಪರೀಕ್ಷೆ ನಡೆಸುವ ವೇಳೆ, ತಮ್ಮ ಡ್ಯೂಟಿಗೆ ರಜೆ ಇದ್ದರೂ ಸುರೇಶ್‌ ಕರ್ತವ್ಯಕ್ಕೆ ಹಾಜರಾಗಿದ್ದರು. ತಾನೇ ಖುದ್ದು ಮುಂದೆ ನಿಂತು ರೇಣುಕಾಸ್ವಾಮಿ ಶವ ಮರಣೋತ್ತರ ಪರೀಕ್ಷೆ ಮಾಡಿಸಿದ್ದರು.

ಪವಿತ್ರ ಗೌಡ ಕ್ಲೋಸ್ ಫ್ರೆಂಡ್ ಪತಿಯಾಗಿರುವ ಕಾರಣ ಮರಣೋತ್ತರ ಪರೀಕ್ಷೆ ವರದಿಯನ್ನು ಮತ್ತೊಮ್ಮೆ ಪರಿಶೀಲನೆ ಮಾಡಲಾಗುತ್ತಿದೆ. ಪರಿಶೀಲನೆ ನಡೆಸಿ ಡಾ. ಪ್ರದೀಪ್ ಎಂಬ ವೈದ್ಯರಿಂದ ಪೊಲೀಸರಿಗೆ ಮತ್ತೆ ಮರಣೋತ್ತರ ಪರೀಕ್ಷಾ ವರದಿ ಸಲ್ಲಿಕೆ ಮಾಡಲಾಗುತ್ತಿದೆ. 
ತನಿಖೆಗೊಳಪಡಿಸಿ ಸಮತ ನೀಡಿದ ಹೇಳಿಕೆಯನ್ನು ಪೊಲೀಸರು ದಾಖಲು ಮಾಡಿಕೊಂಡಿದ್ದಾರೆ. ಜೊತೆಗೆ ಸಮತ ಪತಿ ಡಾ. ಸುರೇಶ್ ಅವರ ಕಾಲ್ ಡಿಟೇಲ್ಸ್, ಚಾಟಿಂಗ್ಸ್ ಪರಿಶೀಲಿಸಲಾಗಿದೆ. 
ಏನಿದು ಪ್ರಕರಣ? ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಮತ್ತು ಗೆಳತಿ ಪವಿತ್ರಾ ಗೌಡ ಅರೆಸ್ಟ್​ ಆಗಿರುವ ಸುದ್ದಿ ರಾಜ್ಯದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್​ ಕೈವಾಡ ಇದೆ. ದರ್ಶನ್​ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್​ರನ್ನು ಬಂಧಿಸಲಾಗಿದೆ. ಫೆಬ್ರವರಿ 27ರಿಂದ ದರ್ಶನ್​ ಗೆಳತಿ ಪವಿತ್ರಾ ಗೌಡಗೆ ರೇಣುಕಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಈ ವಿಚಾರ ದರ್ಶನ್​ಗೆ ತಿಳಿದಿದೆ. ರೇಣುಕ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.
ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net