ಅದ್ಧೂರಿಯಿಂದ ರೇಣುಕಾಚಾರ್ಯ ಜಯಂತಿ

IMG-20230305-WA0030.jpg
Published on

ರಾಯಚೂರು: ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ನಗರದಲ್ಲಿ ಜಿಲ್ಲಾ ಜಂಗಮ ಸಮಾಜ ಮತ್ತು ಜಿಲ್ಲಾ ವೀರಶೈವ ಸಮಾಜದಿಂದ ಭಾನುವಾರ ಅದ್ಧೂರಿಯಿಂದ ಆಚರಿಸಲಾಯಿತು.

ನಗರದ ಕಿಲ್ಲೆ ಬೃಹನ್ಮಠದಿಂದ ಬೈಪಾಸ್ ರಸ್ತೆಯಲ್ಲಿರುವ ರೇಣುಕಾಚಾರ್ಯ ವೃತ್ತದವರೆಗೆ ಬೈಕ್ ರ್ಯಾಲಿ ನಡೆಸಲಾಯಿತು. ವೃತ್ತದಲ್ಲಿ ರೇಣುಕಾಚಾರ್ಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಂತರ ವೀರಶೈವ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತದಿಂದ ವೇದಿಕೆ ಕಾರ್ಯಕ್ರಮ‌ ಜರುಗಿತು.

ಈ ಸಂದರ್ಭದಲ್ಲಿ ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ಸೋಮವಾರ ಪೇಟೆ ಹಿರೇಮಠದ ಅಭಿನವ ರಾಚೋಟಿವೀರ ಸ್ವಾಮೀಜಿ, ಶಾಸಕರಾದ ಡಾ.ಶಿವರಾಜ ಪಾಟೀಲ್, ಬಸನಗೌಡ ದದ್ದಲ್, ಮಾಜಿ ಎಂಎಲ್ಸಿ ಎನ್.ಎಸ್.ಬೋಸರಾಜು, ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್, ನಗರಸಭೆ ಅಧ್ಯಕ್ಷೆ ಲಲಿತಾ ಕಡಗೋಲ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net