ರೇಣುಕಾಚಾರ್ಯರ ಜಯಂತಿ ಆಚರಣೆ 5ಕ್ಕೆ

Published on

ಸಿಂಧನೂರು: ತಾಲೂಕಿನ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಮಾ.5 ರಂದು ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಿಸಬೇಕೆಂದು ಅಧಿಕಾರಿಗಳಿಗೆ ತಹಸೀಲ್ದಾರ್ ಅರುಣ್ ದೇಸಾಯಿ ಹೇಳಿದರು.


ತಹಸಿಲ್ ಕಚೇರಿಯಲ್ಲಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಗುರುವಾರ ಮಾತನಾಡಿದರು. ವೀರಶೈವ ಲಿಂಗಾಯತ ಸಮಾಜದ ತಾಲೂಕು ಅಧ್ಯಕ್ಷ ಅಶೋಕಗೌಡ ಗದ್ರಟಗಿ ಮಾತನಾಡಿ, ಅಂದು ಬೆಳಗ್ಗೆ ಪಾಟೀಲ್‌ವಾಡಿಯ ಸಂಗಮೇಶ್ವರ ದೇವಸ್ಥಾನದಿಂದ ತಹಸಿಲ್ ಕಚೇರಿವರೆಗೆ ಅದ್ದೂರಿ ಮೆರವಣಿಗೆ ನಡೆಸಲಾಗುವುದು. ತಹಸಿಲ್ ಕಚೇರಿಯಲ್ಲಿ ರೇಣುಕಾಚಾರ್ಯರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದ ನಂತರ ಕೋಟೆ ಈರಣ್ಣ ದೇವಸ್ಥಾನದವರೆಗೆ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ ಧಾರ್ಮಿಕ ಸಭೆ ನಡೆಯಲಿದೆ ಎಂದರು.

ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಶಿವಕುಮಾರ, ವೀರಮಹೇಶ್ವರ ಕ್ಷೇಮಾಭಿವೃದ್ಧಿ ಸೇವಾ ಸಂಸ್ಥೆ ಅಧ್ಯಕ್ಷ ಮಲ್ಲಿನಾಥಶಾಸ್ತ್ರಿ, ಪ್ರಮುಖರಾದ ಅಮರಯ್ಯಸ್ವಾಮಿ ಅಲಬನೂರು, ವೀರೇಶ ಯಡಿಯೂರಮಠ, ಸಂಗಮೇಶ ಅಂಗಡಿ, ರವಿ ಹಿರೇಮಠ ಇತರರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net