

ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಽತನಾಗಿದ್ದ ಆರೋಪಿ ಧನರಾಜ್, ಇಲ್ಲಿನ ಕೇಂದ್ರ ಕಾರಾಗೃಹದಿಂದ ಮಂಗಳವಾರ ಸಂಜೆ ಬಿಡುಗಡೆಯಾಗಿದ್ದಾನೆ.ರೇಣುಕಸ್ವಾಮಿ ಹತ್ಯೆ ಪ್ರಕರಣದ 9ನೇ ಆರೋಪಿಯಾಗಿದ್ದ ಧನರಾಜ್‌ನನ್ನು ಜೈಲಿನಿಂದ ಸ್ವಾಗತಿಸಲು ಯಾರೂ ಬಾರದ ಹಿನ್ನೆಲೆ ಏಕಾಂಗಿಯಾಗಿ ಹೊರಟಿದ್ದಾನೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ ಹಾಗೂ ಇತರರಿಗೆ ಐಷಾರಾಮಿ ವ್ಯವಸ್ಥೆ ಮಾಡಿದ್ದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಧನರಾಜ್‌ನನ್ನು ಆ. 29ರಂದು ಇಲ್ಲಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು. ಕೈದಿ ನಂ. 8629 ಆಗಿದ್ದ ಧನರಾಜ್‌ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಮಂಗಳವಾರ ಜಾಮೀನು ಷರತ್ತುಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಜೈಲಿನಿಂದ ಹೊರಬಂದ ಧನರಾಜ್, ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ.