ಅವೈಜ್ಞಾನಿಕ ಆದೇಶ ರದ್ದುಪಡಿಸಲಿ: ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ ಒತ್ತಾಯ

Protest
Published on

ಮೈಸೂರು: ಕಾಯಂಗೊಂಡ ಗುತ್ತಿಗೆ ಆಧಾರದ ಶಿಕ್ಷಕರು ಹಾಗೂ ಉಪನ್ಯಾಸಕರ ವೇತನ ಮತ್ತು ಪಿಂಚಣಿಯನ್ನು ಮರುನಿಗದಿಪಡಿಸಲು ಹೊರಡಿಸಿರುವ ಅವೈಜ್ಞಾನಿಕ ಆದೇಶವನ್ನು ರದ್ದುಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಒತ್ತಾಯಿಸಿದ್ದಾರೆ.

ಕಾಯಂಗೊಂಡ ಗುತ್ತಿಗೆ ಶಿಕ್ಷಕ, ಉಪನ್ಯಾಸಕರ ನಿವೃತ್ತಿ ವೇತನ ಹಾಗೂ ಮರುನಿಗದಿಪಡಿಸದಂತೆ ಕೋರಿರುವ ಬಗೆಗಿನ ಪರಿಶೀಲನೆಗಾಗಿ ಅಂದಿನ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಆದರೆ ಇದುವರೆಗೂ ಸಮಿತಿ ನೀಡಿರುವ ವರದಿಯನ್ನು ಸರ್ಕಾರ ಪರಿಶೀಲನೆ ಮಾಡಿಲ್ಲ. ಸಮಿತಿ ನೀಡಿರುವ ವರದಿಯನ್ನು ಸಚಿವ ಸಂಪುಟದಲ್ಲಿ ಮಂಡಿಸಿ ಚರ್ಚಿಸದೆ ನಿಯಮಬಾಹಿರವಾಗಿ ಆದೇಶ ಹೊರಡಿಸಲಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕರ್ನಾಟಕ ರಾಜ್ಯ ಕಾಯಂಗೊಂಡ ಗುತ್ತಿಗೆ ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳ ಶಿಕ್ಷಕರ, ಮುಖ್ಯೋಪಾಧ್ಯಾಯರು, ಉಪನ್ಯಾಸಕರು, ಪ್ರಾಂಶುಪಾಲರ ನಿವೃತ್ತ ಒಕ್ಕೂಟ ಈ ಸಂಬಂಧ ಸರ್ಕಾರಕ್ಕೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜವಾಗಿಲ್ಲ. ಇಲಾಖೆಯ ಕೆಲ ಅಧಿಕಾರಿಗಳು ಈ ರೀತಿ ಮಾಡಿದ್ದಾರೆ ಎಂದರು ದೂರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net