

ದೇವದುರ್ಗ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ರದ್ದು ಮಾಡುವಂತೆ ಒತ್ತಾಯಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯಿಂದ ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿಗೆ ಬುಧವಾರ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ:ವಕ್ಫ್ ಕಾಯ್ದೆ ತಿದ್ದುಪಡಿ ರದ್ದುಗೊಳಿಸಲು ಪಟ್ಟು
ಮುಸ್ಲಿಂರಿಗೆ ಸಂವಿಧಾನಬದ್ಧವಾಗಿ ನೀಡಲಾದ ವಕ್ಫ್ ಕಾಯ್ದೆಯನ್ನು ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿ ಮುಸ್ಲಿಮರ ಹಕ್ಕುಗಳನ್ನು ಕಸಿಯಲು ಮುಂದಾಗಿದೆ. ವಕ್ಫ್ ತಿದ್ದುಪಡಿ ಕಾಯ್ದೆ ತಾರತಮ್ಯದಿಂದ ಕೂಡಿದೆ. ಇದು ಸಂವಿಧಾನದ 14, 25, 26 ಹಾಗೂ 29ನೇ ವಿಧಿಯಲ್ಲಿ ಪ್ರತಿಪಾಧಿಸಲಾದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಹಿಂದು, ಸಿಖ್, ಬೌದ್ಧ, ಕ್ರಿಶ್ಚಿಯನ್ ಸಮುದಾಯ ಆಸ್ತಿಗಳ ರಕ್ಷಣೆ ಹಕ್ಕು ಹೊಂದಿವೆ. ಆದರೆ, ಮುಸ್ಲಿಮರಿಂದ ಆ ಹಕ್ಕು ಕಸಿಯುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು.
ರಾಷ್ಟ್ರಪತಿ ಮಧ್ಯಪ್ರವೇಶಿಸಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅಂಗೀಕರಿಸಿದ ವಿವಾದಾತ್ಮಕ ವಕ್ಫ್ ತಿದ್ದುಪಡಿ ಮಸೂದೆಯನ್ನು ರದ್ದು ಗೊಳಿಸಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.