

ಹಾಸನ: ನಗರದ ಸಂತೆಪೇಟೆಯಲ್ಲಿರುವ ಸೆಸ್ಕ್ ಕಚೇರಿ ಸಭಾಂಗಣದಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ಶನಿವಾರ ವಿದ್ಯುತ್ ಗುತ್ತಿಗೆದಾರರ ಮತು ್ತ ಸೆಸ್ಕ್ ಅಧಿಕಾರಿಗಳ ಜತೆ ಕುಂದುಕೊರತೆ ಸಭೆ ನಡೆಸಿದರು.
ಕ್ಷೇತ್ರ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ದುಸ್ಥಿತಿಯಲ್ಲಿರುವ ವಿದ್ಯುತ್ ಕಂಬಗಳನ್ನು ಬದಲಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಸೂಚಿಸಿದರು. ಟ್ರಾನ್ಸ್‌ಫಾರ್ಮರ್‌ಗಳ ಕೊರತೆ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದು ಪೂರೈಸಿಕೊಳ್ಳಬೇಕು. ಮಹಾನಗರ ಪಾಲಿಕೆಗೆ ಹೆಚ್ಚುವರಿ ಗ್ರಾಮಗಳು ಸೇರ್ಪಡೆಗೊಂಡ ಹಿನ್ನೆಲೆ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗದಂತೆ ಎಚ್ಚರವಹಿಸಬೇಕು. ಸಾರ್ವಜನಿಕರಿಂದ ದೂರುಗಳು ಬಂದರೆ ತುರ್ತು ಸ್ಪಂದಿಸುವ ಕೆಲಸಗಳಾಗಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.