

ಬಂಟ್ವಾಳ: ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉರಗತಜ್ಞ ಸ್ನೇಕ್ ಕಿರಣ್ ಅವರಿಂದ ಉರಗ ಸಂರಕ್ಷಣೆ ಹಾಗೂ ಪರಿಸರದ ಉಳಿವಿನ ಕುರಿತ ಮಾಹಿತಿ ಕಾರ್ಯಕ್ರಮ ನಡೆಯಿತು.
ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗ ಮಕ್ಕಳು ಭಾಗವಹಿಸಿದ್ದು, ವಿವಿಧ ಜಾತಿಯ ಹಾವುಗಳು ಹಾಗೂ ಅವುಗಳ ಸ್ವಭಾವ ಸಹಿತ ಹಲವು ವಿಚಾರಗಳ ಕುರಿತು ಮಾಹಿತಿ ನೀಡಲಾಯಿತು. ಇದಾದ ಬಳಿಕ ವಿದ್ಯಾರ್ಥಿಗಳ ಜತೆ ಸಂವಾದ ನಡೆಯಿತು.
ಪತ್ರಕರ್ತ ಸಂದೀಪ್ ಸಾಲ್ಯಾನ್ ಗಿಡ ನೆಟ್ಟು ಬಳಿಕ ಪರಿಸರ ದಿನಾಚರಣೆ ಮಹತ್ವ ವಿವರಿಸಿದರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಹರೀಶ ಮಾಂಬಾಡಿ, ಮುಖ್ಯಶಿಕ್ಷಕಿ ಲಕ್ಷ್ಮೀ ಕೆ., ಹೈಸ್ಕೂಲ್ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕವೃಂದ ಉಪಸ್ಥಿತರಿದ್ದರು. ಸುಶೀಲಾ ಲಿಂಗಪ್ಪ, ಹೇಮಾವತಿ, ಪೂರ್ಣಿಮಾ, ಲಾವಣ್ಯ, ನಿಶ್ಮಿತಾ, ಶಿವಮೂರ್ತಿ ಸಹಕರಿಸಿದರು.