

ಮಡಿಕೇರಿ: ೭೬ನೇ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮ ಇಂದು ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆಯಿತು.
ಕೊಡಗು ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನಿರ್ ಅಹಮದ್ ರವರು ಧ್ವಜಾರೋಹಣ ಮಾಡಿದರು. ಅಲ್ಲದೆ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಎಲ್ಲ ಗಣ್ಯರು ಮಾತನಾಡಿದರು.
ಈ ಸಂದರ್ಭದಲ್ಲಿ ಸೇವಾದಳದ ಜಿಲ್ಲಾಧ್ಯಕ್ಷ ಹಾಗೂ ಮೂಡ ಸದಸ್ಯ ಕಾನೇಹಿತ್ಲು ಮೊಣ್ಣಪ್ಪ, ಕೊಡಗು ಜಿಲ್ಲಾ ಕಾಂಗ್ರೆಸ್‌ನ ಗೌರವ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಮೂಡ ಸದಸ್ಯರಾದ ಆರ್.ಪಿ.ಚಂದ್ರಶೇಖರ್, ನಗರ ಸಭೆ ನಾಮ ನಿರ್ದೇಶಕ ಸದಸ್ಯ ಸದಾಮುದ್ದಪ್ಪ, ಮಾಜಿ ನಗರಸಭಾ ಸದಸ್ಯರಾದ ಪ್ರಕಾಶ್ ಆಚಾರ್ಯ, ಬಂಗೇರ, ಮಾಜಿ ನಗರಸಭೆ ಉಪಾಧ್ಯಕ್ಷ ಲೀಲಾಶೇಷಮ್ಮ, ಕವನ್ ಕೊತೋಳಿ, ನಜೀರ್ ಅಹ್ಮದ್, ಹಬೀಬ್ ಅಹಮದ್, ಸುಬ್ರಮಣಿ, ಸುನಂದ, ಉಷಾ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.