ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ

26adarshkdga5
Published on

ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ೭೪ನೇ ಗಣರಾಜ್ಯೋತ್ಸವ ಆಚರಿಸಲಾಯಿತು.


ಕಾರ್ಯಕ್ರಮದಲ್ಲಿ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಡಾ.ಕೆ.ಬಿ.ಕಾರ್ಯಪ್ಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ದ್ವಜಾರೋಹಣ ನೆರೆವೇರಿಸಿ ಮಾತನಾಡಿ, ದೇಶಕ್ಕಾಗಿ ಮಡಿದ ವೀರರನ್ನು ಸ್ಮರಿಸಿ ವೈದ್ಯಕೀಯ ವೃತ್ತಿಯಲ್ಲಿರುವ ನಾವೆಲ್ಲರೂ ಸಮಾಜಕ್ಕೆ ಸೇವೆ ನೀಡುವಂತಾಗಬೇಕು ಎಂದರು.


ಶೈಕ್ಷಣಿಕವಾಗಿ ವರ್ಷದಿಂದ ವರ್ಷಕ್ಕೆ ಹೊಸ ಹೊಸ ಕೊರ್ಸ್‌ಗಳನ್ನು ಸಂಸ್ಥೆಯಲ್ಲಿ ಪ್ರಾರಂಬಿಸಲಾಗುತ್ತಿದ್ದು, ಅದರಂತೆ ಈ ಬಾರಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿಯಲ್ಲಿ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್ ಪ್ರಾರಂಭಿಸಲಾಗಿದೆ. ಅಲ್ಲದೆ ಸರ್ಕಾರದಿಂದ ೩೬.೯೭ ಕೋಟಿ ವೆಚ್ಚದಲ್ಲಿ ಕ್ರೀಟಿಕಲ್ ಕೇರ್ ಘಟಕ ಆಸ್ಪತ್ರೆ ನಿರ್ಮಾಣ ಮಾಡಲು ಆಡಳಿತಾತ್ಮಾಕ ಅನುಮೋದನೆ ದೊರೆತಿರುವ ಬಗ್ಗೆ ತಿಳಿಸಿದರು.


ಸಮಾರಂಭದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಂಶುಪಾಲ ಡಾ.ವಿಶಾಲ್ ಕುಮಾರ್, ಮುಖ್ಯ ಆಡಳಿತಾಧಿಕಾರಿ ಎಸ್.ಎಲ್.ಸ್ವಾಮಿ ಮಾತನಾಡಿದರು.


ವಿದ್ಯಾರ್ಥಿಗಳಿಂದ ದೇಶಭಕ್ತಿ ಗಾಯನ ನಡೆಯಿತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆಯ ವೈದ್ಯರುಗಳು, ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ಎಂಬಿಬಿಎಸ್, ಬಿ.ಎಸ್ಸಿ ನಸಿರ್ಂಗ್, ಸ್ನಾತಕೋತ್ತರ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net