ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಗಣರಾಜ್ಯೋತ್ಸವ

27.npk -2
Published on

ಮಡಿಕೇರಿ: ನಾಪೋಕ್ಲುವಿನ ಸ್ಥಳೀಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಪ್ರಾಂಶುಪಾಲರಾದ ಮೇದುರ ವಿಶಾಲ ಕುಶಾಲಪ್ಪ ಧ್ವಜಾರೋಹಣವನ್ನು ನೆರವೇರಿಸಿದರು. ಉಪಪ್ರಾಂಶುಪಾಲ ಎಂ.ಎಸ್.ಶಿವಣ್ಣ, ಗೋಪಮ್ಮ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಭಾಷಣ ಹಾಗೂ ದೇಶಭಕ್ತಿ ಗೀತೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ನಂತರ ದತ್ತಿನಿಧಿ ಬಹುಮಾನ ವಿತರಣೆ ಮಾಡಲಾಯಿತು. ಶಿಕ್ಷಕಿ ಉಷಾರಾಣಿ, ರೇಖಾ ಶಿವಣ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net