

ನಾಪೋಕ್ಲು: 76ನೇ ಗಣರಾಜ್ಯೋತ್ಸವವನ್ನು ನಾಲ್ಕು ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಇಲ್ಲಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವದ ಆಚರಣೆಯಲ್ಲಿ ಸಂಸ್ಥೆಯ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆ ಉಪಾಧ್ಯಕ್ಷ ನೆರವಂಡ ಸುನಿಲ್ ದೇವಯ್ಯ ಮಾತನಾಡಿ, ಪ್ರತಿಯೊಬ್ಬರೂ ಪ್ರತಿದಿನ ಸಂವಿಧಾನದ ವಿಶೇಷತೆಯ ಬಗ್ಗೆ ತಿಳಿದುಕೊಳ್ಳಬೇಕು ಎಂದರು.
ಪ್ರಾಂಶುಪಾಲೆ ಬಿ.ಎಂ.ಶಾರದಾ ಮಾತನಾಡಿ, ರಾಷ್ಟ್ರೀಯ ಹಬ್ಬಗಳನ್ನು ಆಚರಿಸುವುದರಿಂದ ವಿದ್ಯಾರ್ಥಿಗಳಲ್ಲಿ ಭಾವೈಕ್ಯತೆ ಬೆಳೆಯಲು ಸಾಧ್ಯ ಎಂದರು.
ಶಿಕ್ಷಕಿ ಲೀನಾ ಸಿ.ಕೆ.ಮಾತನಾಡಿ ದೇಶದ ಸಂವಿಧಾನದ ರಕ್ಷಣೆಗಾಗಿ ದುಡಿದ ಪ್ರತಿಯೊಬ್ಬರನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯರ ಆದ್ಯ ಕರ್ತವ್ಯ ಎಂದರು.
ಸಂಸ್ಥೆಯ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕ ಚೌರಿರ ಮಂದಣ್ಣ, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.