

ಸವದತ್ತಿ: ಪಟ್ಟಣದಲ್ಲಿ ಅನೇಕ ಅಭಿವದ್ಧಿ ಕಾರ್ಯಗಳು ನಡೆಯುತ್ತಿದ್ದು, ಒಳಚರಂಡಿ ಕಾಮಗಾರಿ ಶ್ರೀದಲ್ಲಿ ಪ್ರಾರಂಭವಾಗಲಿದೆ ಎಂದು ಶಾಸಕ ವಿಶ್ವಾಸ ವೆದ್ಯ ಹೇಳಿದರು.
ಪಟ್ಟಣದ ಎಸ್ಕೆ ಹೆಸ್ಕೂಲ್ ಆವರಣದಲ್ಲಿ ತಾಲೂಕಾಡಳಿತದಿಂದ ಭಾನುವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಪಟ್ಟಣದಲ್ಲಿ ಒಳ ಚರಂಡಿ ವ್ಯವಸ್ಥೆ ಸರಿಪಡಿಸಲು 124 ಕೋಟಿ ರೂ. ಅನುದಾನದ ಒಳಚರಂಡಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. 41 ಕೋಟಿ ರೂ. ಮಂಜೂರಾಗಿ ಕಾಮಗಾರಿ ಶ್ರೀದಲ್ಲಿ ಕಾರ್ಯರೂಪಕ್ಕೆ ಬರಲಿದೆ. ಅನೇಕ ನಾಯಕರ ಹೋರಾಟ ಹಾಗೂ ಪರಿಶ್ರಮದಿಂದ ಸ್ವಾತಂತ್ರ್ಯ ದೊರೆತಿದೆ. ನಾವೆಲ್ಲರೂ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಶ್ರಮಿಸೋಣ ಎಂದರು.
ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ ಮಾತನಾಡಿ, ಭಾರತದ ಸಂವಿಧಾನವು ಜಗತ್ತಿಗೆ ಮಾದರಿಯಾಗಿದ್ದು, ಸಂವಿಧಾನ ರಚನಾಕಾರ ಡಾ. ಬಿ.ಆರ್. ಅಂಬೇಡ್ಕರ್ ಕಾರ್ಯ ಸ್ಮರಣೀಯ ಎಂದರು. ಶಾಲಾ ಮಕ್ಕಳು, ಎನ್ಸಿಸಿ, ಪೊಲೀಸ್ ಇಲಾಖೆ, ಸ್ಕೌಟ್ಸ್ ಮತ್ತು ಗೆಡ್ಸ್ ಮಕ್ಕಳಿಂದ ಆಕರ್ಷಕ ಪಥಸಂಚಲನ ಜರುಗಿತು. ಸಾಂಸತಿಕ ಕಾರ್ಯಕ್ರಮಗಳು ನಡೆದವು. ಶಿಂತ್ರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ 'ಸೇವ್ ದ ಗರ್ಲ್ ಚೆಲ್ಡ್ ' ನತ್ಯ ನೋಡುಗರ ಗಮನ ಸೆಳೆಯಿತು. ಗಣ್ಯರಿಗೆ ಪುರಸ್ಕಾರ, ಸನ್ಮಾನ ಮಾಡಲಾಯಿತು. ಅಶ್ವತ್ಥ ವೆದ್ಯ, ತಾಪಂ ಇಒ ಆನಂದ ಬಡಕುಂದ್ರಿ, ಗ್ರೇಡ್ 2 ತಹಸೀಲ್ದಾರ್ ಎಂ.ಎನ್.ಮಠದ, ಪುರಸಭೆ ಅಧ್ಯೆ ಚಿನ್ನವ್ವ ಹುಚ್ಚಣ್ಣವರ, ಉಪಾಧ್ಯೆ ದಾವಲಬಿ ಸನದಿ, ಎಪಿಎಂಸಿ ಅಧ್ಯ ಚಂದ್ರು ಜಂಬ್ರಿ, ಪಿಐ ಧರ್ಮಾಕರ ಧರ್ಮಟ್ಟಿ, ಮುಖ್ಯಾಧಿಕಾರಿ ಸಂಗಬಸಯ್ಯ ಗದಗಿಮಠ, ಶಿರಸ್ತೆದಾರ ಶಶಿರಾಜ ವನಕೆ ಇತರರು ಇದ್ದರು.