

ಮಡಿಕೇರಿ: ಮಡಿಕೇರಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.
ಡಾ.ಬಿ.ಆರ್.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡುವ ಮೂಲಕ ಕಾರ್ಯಕ್ರಮದ ಉದ್ಘಾಟನೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಚ್.ಎಲ್.ದಿವಾಕರ್, ವಿದ್ಯಾರ್ಥಿನಿಯರಿಗೆ ಓದುವಿಕೆಯನ್ನು ಕುರಿತು ಹಾಗೂ ಡಿ.ಎಸ್.ಎಸ್ ನಿಂದ ವಿದ್ಯಾರ್ಥಿಗಳಿಗೆ ಸಿಗುವ ಸೌಲಭ್ಯಗಳ ಕುರಿತು ಮಾರ್ಗದರ್ಶನ ನೀಡಿದರು.
ಮಡಿಕೇರಿಯ ಮಹಿಳಾ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ನಿರ್ಮಲಾರವರು, ವಿದ್ಯಾರ್ಥಿನಿಯರಿಗೆ ಸಂವಿಧಾನದ ಮಹತ್ವವನ್ನು ಕುರಿತು ಮಾಹಿತಿ ನೀಡಿ, ಸಂವಿಧಾನದ ವಿಧಿ, ಮೂಲಭೂತ ಹಕ್ಕು ಹಾಗೂ ಮೂಲಭೂತ ಕರ್ತವ್ಯವನ್ನು ವಿವರಿಸಿದರು.
ಪತ್ರಕರ್ತ ಚಂದನ್ ನಂದರಬೆಟ್ಟು ಮಾತನಾಡಿ, ಜಾತಿ ವ್ಯವಸ್ಥೆ ನಮ್ಮ ಸಮಾಜದಲ್ಲಿ ಹೇಗೆ ಬೆಳೆದು ಹೆಮ್ಮರವಾಗಿ ನಿಂತಿದ್ದು, ಜಾತಿಯ ರೇಖೆಯನ್ನು ಮೀರಿ ಸಾಧನೆಯನ್ನು ಮಾಡಬೇಕು. ಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕೆಂದರು.
ವಿದ್ಯಾರ್ಥಿನಿಯರಿಂದ ದೇಶ ಭಕ್ತಿ ಗೀತೆಗಳು ಮೊಳದವು. ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ, ಬಾಲಕಿಯರ ವಸತಿ ನಿಲಯದ ಮೇಲ್ವಿಚಾರಕಿ ಸಿಂಧೂ ಹಾಜರಿದ್ದರು.