

ರಾಮದುರ್ಗ: ಅದ್ದೂರಿ ಗಣರಾಜ್ಯೋತ್ಸವ ಆಚರಣೆಗೆ ವಿವಿಧ ರೂಪುರೇಷೆ ಹಾಕಿಕೊಳ್ಳಲಾಗಿದೆ. ತಾಲೂಕುಮಟ್ಟದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಭಾಗಿಯಾಗಿ ಆಚರಣೆ ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಬೇಕು ಎಂದು ತಹಸೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ತಿಳಿಸಿದರು.
ಪಟ್ಟಣದ ಮಿನಿ ವಿಧಾನಸೌಧದ ತಹಸೀಲ್ದಾರ್ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ ಕುರಿತು ಗುರುವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಅರಮನೆ ಆವರಣದಲ್ಲಿ ಧ್ವಜಾರೋಹಣ ಜರುಗಲಿದೆ. ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಗುವುದು ಎಂದರು.
ತಾಪಂ ಇಒ ಬಸವರಾಜ ಐನಾಪುರ, ಗ್ರೇಡ್&2 ತಹಸೀಲ್ದಾರ್ ಸಿದ್ಧಾರೂಢ ಬನ್ನಿಕೊಪ್ಪ, ಬಿಇಒ ಆರ್.ಟಿ.ಬಳಿಗಾರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಪರಶುರಾಮ ಪತ್ತಾರ, ಸಿಡಿಪಿಒ ಶಂಕರ ಕುಂಬಾರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶಿವಕ್ಕ ಮಾದರ, ಎಡಿಎಲ್ಆರ್ ಪ್ರಕಾಶ ಸತ್ತಿಗೇರಿ, ಪ್ರಕಾಶ ಮುಗಳಕೋಡ, ಪಿಎಸ್ಐ ಸುನೀಲಕುಮಾರ ನಾಯಕ ಇತರರಿದ್ದರು. ಮುಖ್ಯಶಿಕ್ಷಕ ಪಿ.ಡಿ. ಕಾಲವಾಡ ನಿರೂಪಿಸಿದರು.