

ಮೈಸೂರು: ಆದಿ ಕರ್ನಾಟಕ ಮಹಾಸಂಸ್ಥೆ ಹಾಗೂ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಅಶೋಕಪುರಂನ ಡಾ.ಬಿ.ಆರ್. ಅಂಬೇಡ್ಕರ್ ಉದ್ಯಾನದಲ್ಲಿ ಭಾನುವಾರ ಸಂವಿಧಾನ ಜಾರಿಯ ವಜ್ರ ಮಹೋತ್ಸವ ಆಚರಿಸಲಾಯಿತು. ನಂತರ ಡಾ.ಅಂಬೇಡ್ಕರ್ ಭಾವಚಿತ್ರ ಹಾಗೂ ಸಂವಿಧಾನದ ಆಶಯದ ಪ್ರತಿಗಳ ಭಾವಚಿತ್ರ ಹಿಡಿದು ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಪತ್ರಿಕೋದ್ಯಮಿ ರಶ್ಮಿ ಕೋಟಿ ಧ್ವಜಾರೋಹಣ ನೆರವೇರಿಸಿದರು. ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಸಂವಿಧಾನ ಪೀಠಿಕೆ ಬೋಧಿಸಿದರು. ಆದಿ ಕರ್ನಾಟಕ ಮಹಾಸಂಸ್ಥೆಯ ಅಧ್ಯಕ್ಷ ಸಿದ್ದರಾಜು ಮೆರವಣಿಗೆ ಉದ್ಘಾಟಿಸಿದರು. ಮಾಜಿ ಮೇಯರ್ ಪುರುಷೋತ್ತಮ್, ಸಾಹಿತಿ ಸಿದ್ದಸ್ವಾಮಿ, ಕೆ.ಆರ್. ಬ್ಯಾಂಕಿನ ಮಾಜಿ ಅಧ್ಯಕ್ಷ ಎಚ್. ವಾಸು, ಆದಿ ಕರ್ನಾಟಕ ಮಹಾಸಂಸ್ಥೆ ದೊಡ್ಡಗರಡಿ ಅಧ್ಯಕ್ಷ ಆರ್.ಸಿ. ಮಹೇಶ್, ಆದಿ ಕರ್ನಾಟಕ ಮಹಾಸಂಸ್ಥೆ ಚಿಕ್ಕಗರಡಿ ಅಧ್ಯಕ್ಷ ಸಿ. ಗಂಗಾಧರ್, ಸಮಾಜ ಸೇವಕ ವಿ. ರಾಮಸ್ವಾಮಿ, ನಗರಪಾಲಿಕೆ ಮಾಜಿ ಸದಸ್ಯೆ ಪಲ್ಲವಿ ಬೇಗಂ, ಶ್ರೀರಾಂಪುರ ಗ್ರಾಪಂ ಮಾಜಿ ಸದಸ್ಯೆ ಕಮಲಾ ನಟರಾಜ್ ಹಾಗೂ ಇತರರು ಇದ್ದರು.