ಚೆಟ್ಟಳ್ಳಿಯಲ್ಲಿ ಗಣರಾಜ್ಯೋತ್ಸವ

Republic Day in Chettally
Published on

ಮಡಿಕೇರಿ:

ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 75ನೇ ಗಣರಾಜ್ಯೋತ್ಸವ ಶುಕ್ರವಾರ ಆಚರಿಸಲಾಯಿತು. ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿಉತ್ತಪ್ಪ ಸಂಘದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿದರು.

ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ರಾಷ್ಟ್ರದ ಬಲವರ್ಧನೆಗೆ ಯುವಕರು ಹಾಗೂ ಮುಂದಿನ ಪೀಳಿಗೆಯವರು ಶಕ್ತಿ ಮೀರಿ ರಾಷ್ಟ್ರವನ್ನು ಒಗ್ಗೂಡಿಸುವ ಕೆಲಸ ಮಾಡಬೇಕು ಎಂದರು.

ಸ್ವಾತಂತ್ರ‍್ಯ ಹೋರಾಟಗಾರರ ಬಲಿದಾನವನ್ನು ಈ ವೇಳೆ ನೆನೆಸಿಕೊಂಡರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಪೇರಿಯನ ಪೂಣಚ್ಚ, ಸಂಘದ ನಿರ್ದೇಶಕರುಗಳು ಹಾಗೂ ಸಂಘದ ಸಿಬ್ಬಂದಿ ವರ್ಗದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net