ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಕೈಜೋಡಿಸಿ

Maski Meeting
ಮಸ್ಕಿ ತಹಸಿಲ್ ಕಚೇರಿಯಲ್ಲಿ ಗಣರಾಜ್ಯೋತ್ಸವ ಪೂರ್ವಭಾವಿ ಸಭೆ ನಡೆಯಿತು. ತಹಸೀಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳ, ಪುರಸಭೆ ಮುಖ್ಯಾಧಿಕಾರಿ ನರಸರಡ್ಡಿ, ಗ್ರೇಡ್ 2 ತಹಸೀಲ್ದಾರ್ ಅಶೋಕ ಕುಮಾರ ಪವಾರ ಇತರರಿದ್ದರು.
Published on

ಮಸ್ಕಿ: ಇದೇ 26 ರಂದು ಗಣರಾಜ್ಯೋತ್ಸವವನ್ನು ಅರ್ಥಪೂಣವಾಗಿ ಆಚರಿಸಲು ತಾಲೂಕಿನ ಎಲ್ಲ ಇಲಾಖೆಗಳು ಕೈಜೋಡಿಸಬೇಕು ಎಂದು ತಹಸೀಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳ ಹೇಳಿದರು.

ಪಟ್ಟಣದ ತಹಸಿಲ್ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಬೆಳಗ್ಗೆ 7 ಗಂಟೆಯಿಂದ 8.30 ರೊಳಗೆ ಧ್ವಜಾರೋಹಣ ಮುಗಿಸಿಕೊಂಡು ಪಟ್ಟಣದಲ್ಲಿ 9 ಗಂಟೆಗೆ ನಡೆಯುವ ಸಾರ್ವಜನಿಕ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಬೇಕು.

ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆ ನಿರ್ವಹಿಸಬೇಕು. ಮೈದಾನದ ಸ್ವಚ್ಛತೆ ಹಾಗೂ ಕಾರ್ಯಕ್ರಮ ಆಯೋಜನೆ ಪುರಸಭೆ ಅಧಿಕಾರಿಗಳು ಮಾಡಬೇಕು ಎಂದರು.

ಮುಖ್ಯಾಧಿಕಾರಿ ನರಸರಡ್ಡಿ, ಗ್ರೇಡ್ 2 ತಹಸೀಲ್ದಾರ್ ಅಶೋಕ ಕುಮಾರ ಪವಾರ, ಅಪರಾಧ ವಿಭಾಗದ ಪಿಎಸ್‌ಐ ಭೀಮದಾಸ, ಅಮರೇಗೌಡ, ರಾಮಸ್ವಾಮಿ, ಪ್ರಮುಖರಾದ ಅಂದಾನಪ್ಪ ಗುಂಡಳ್ಳಿ, ದೊಡ್ಡಪ್ಪ ಮುರಾರಿ, ಸಿ.ದಾನಪ್ಪ ನಿಲೋಗಲ್, ದೊಡ್ಡಪ್ಪ ಕಡಬೂರು, ಬಸಪ್ಪ ಬ್ಯಾಳಿ, ಜಿಲಾನಿ ಖಾಜಿ, ದುರ್ಗಾರಾಜ ವಟಗಲ್, ಆರ್.ಕೆ.ನಾಯಕ ಸಂತೋಷ ಹಿರೇದಿನ್ನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net