ಜಿಲ್ಲಾಡಳಿತದಿಂದ ಗಣರಾಜ್ಯೋತ್ಸವ 26ರಂದು

Santosh S. Lad
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲಾಡಳಿತದಿಂದ ನಗರದ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜ. 26ರಂದು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಬೆಳಗ್ಗೆ 9 ಗಂಟೆಗೆ ರಾಷ್ಟ್ರ ಧ್ವಜಾರೋಹಣ ನೇರವೇರಿಸಿ ಗಣರಾಜ್ಯೋತ್ಸವದ ಸಂದೇಶ ನೀಡುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಗೌರವ ಉಪಸ್ಥಿತರಿರುವರು. ಶಾಸಕ ಅರವಿಂದ ಚಂದ್ರಕಾ0ತ ಬೆಲ್ಲದ ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸುವರು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಗೌರವಿಸುವರು. ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಸಂಜೆ 5 ಗಂಟೆಗೆ ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net